ಸುದ್ದಿ

ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ: ಹಲವು ಮನೆ, ವಾಹನಗಳಿಗೆ ಹಾನಿ

Share It

ದಾವಣಗೆರೆ: ವೆಂಕಾ ಭೋವಿ ಕಾಲೋನಿಯಲ್ಲಿ ಗುರುವಾರ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ನಡೆದಿದೆ.

ಘಟನೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಮತ್ತು ಸಬ್ ಇನ್ ಸ್ಪೆಕ್ಟರ್ ಸೇರಿದಂತೆ ನಾಲ್ವರು ಪೊಲೀಸರಿಗೆ ಗಾಯಗಳಾಗಿದ್ದು, ಹಲವಾರು ಮನೆಗಳು ಮತ್ತು ವಾಹನಗಳ ಕಿಟಕಿ ಗಾಜುಗಳು ಹಾನಿಗೊಳಗಾಗಿವೆ.
ಇತ್ತೀಚೆಗೆ ನಾಗಮಂಗಲದಲ್ಲಿ ನಡೆದ ಪ್ರತಿಭಟನೆ ವೇಳೆ ಸತೀಶ್ ಪೂಜಾರಿ ನೀಡಿದ ಪ್ರಚೋದನಕಾರಿ ಹೇಳಿಕೆಯಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ.

ಗಣೇಶ ಮೂರ್ತಿ ಮೆರವಣಿಗೆ ವೇಲೆ ಅನ್ಯ ಧರ್ಮದ ಯುವಕನೊಬ್ಬ ಬಹಿರಂಗವಾಗಿ ಸವಾಲು ಹಾಕಿದ್ದು, ಆಕ್ಷೇಪಾರ್ಹ ಭಾಷೆ ಬಳಸಿ, ಬೆದರಿಕೆ ಹಾಕಿದ್ದ.
ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಹಿಂದೂ ಸಂಘಟನೆಗಳು ಜಗಳೂರು ರಸ್ತೆಯ ವೆಂಕಟೇಶ್ವರ ವೃತ್ತದಲ್ಲಿ ಜಮಾಯಿಸಿ ಡಿಜೆ ಸೆಟ್‌ನೊಂದಿಗೆ ಅರಳಿಮರದ ವೃತ್ತದ ಬಳಿಕ ಮೆರವಣಿಗೆ ಆಗಮಿಸುತ್ತಿದ್ದಂತೆ ಘರ್ಷಣೆ ಶುರುವಾಗಿದೆ. ಈ ವೇಳೆ ಕೆಲವರು ಕಲ್ಲು ತೂರಾಟ ನಡೆಸಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಪೊಲೀಸರು, ತಕ್ಷಣವೇ ಡಿಜೆ ನಿಲ್ಲಿಸಿ ಗಣೇಶ ಮೂರ್ತಿಯನ್ನು ಸುರಕ್ಷಿತವಾಗಿ ವಿಸರ್ಜನೆಗೆ ಅನುಕೂಲ ಮಾಡಿಕೊಟ್ಟರು. , ಘರ್ಷಣೆಯಲ್ಲಿ ಹಲವಾರು ಮನೆ ಮತ್ತು ವಾಹನಗಳಿಗೆ ಹಾನಿಯಾಗಿದೆ.
ಸ್ಥಳದಲ್ಲಿ ನಿಷೇಧಾಜ್ಞೆಗೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದು, ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.


Share It

You cannot copy content of this page