ಅಪರಾಧ ಸುದ್ದಿ

ಕೊಲೆ ಆರೋಪಿಯ ಬಲಗಾಲಿಗೆ ಗುಂಡು ಹೊಡೆದ ಪೊಲೀಸರು

Share It

ಕಲಬುರಗಿ: ಇತ್ತೀಚೆಗೆ ಆಳಂದ ತಾಲೂಕಿನ ಜಿಡಗಾ ಕ್ರಾಸ್​ ಬಳಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ವಿಶ್ವನಾಥ ಜಮಾದಾರ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಿದ್ದ ಆರೋಪಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ.

ಗನ್​ರಿಕವರಿ ಮಾಡಿಕೊಳ್ಳುವುದಕ್ಕಾಗಿ ಅಫಜಲಪುರ ಠಾಣೆ ಪಿಎಸ್ಐ ಸೋಮಲಿಂಗ ಒಡೆಯರ್ ನೇತೃತ್ವದ ಪೊಲೀಸರು ಆರೋಪಿ ಲಕ್ಷ್ಮಣನನ್ನು ಕರೆದುಕೊಂಡು ಆಳಂದ ತಾಲೂಕಿನ ಮಾಡ್ಯಾಳ ಗ್ರಾಮಕ್ಕೆ ಹೋಗಿದ್ದಾರೆ. ಈ ವೇಳೆ ಆರೋಪಿ ಲಕ್ಷ್ಮಣ ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾರೆ.

ಆತ್ಮರಕ್ಷಣೆಗಾಗಿ ಅಫಜಲಪುರ ಠಾಣೆ ಪಿಎಸ್ಐ ಸೋಮಲಿಂಗ ಆರೋಪಿ ಲಕ್ಷ್ಮಣ ಬಲಗಾಲಿಗೆ ಗುಂಡು ಹೊಡೆದಿದ್ದಾರೆ. ಆರೋಪಿ ಲಕ್ಷ್ಮಣ ಬೆಂಗಳೂರು ಮತ್ತು ಕಲಬುರಗಿಯಲ್ಲಿ ಬಂದೂಕು ಸರಬರಾಜು ಮಾಡುತ್ತಿದ್ದನು.

ಈ ಹಿನ್ನೆಲೆಯಲ್ಲಿ ಅಕ್ರಮ ಶಸ್ತ್ರಾಸ್ತ ಪೂರೈಕೆ ಸೇರಿದಂತೆ ಕೊಲೆ ಆರೋಪಿ ಲಕ್ಷ್ಮಣ ಪೂಜಾರಿ ವಿರುದ್ಧ 11 ಕೇಸ್​ಗಳಿವೆ. ವಿಶ್ವನಾಥ್​ ಜಮಾದಾರ್​ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಲಕ್ಷ್ಮಣ ವಿರುದ್ಧ ಆಳಂದ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share It

You cannot copy content of this page