ಸಿರಿಗೆರೆ: ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ಮಠದಲ್ಲಿ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 32 ನೇ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಉಪಾಧ್ಯಕ್ಷರಾದ ಮಾಜಿ ಸಚಿವ ಹೆಚ್.ಆಂಜನೇಯ ಅವರು ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿದ್ದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಡಾ॥ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಜಿ ರವರ ಆಶೀರ್ವಾದವನ್ನು ಪಡೆದರು.
ನಂತರ ಹೆಚ್.ಆಂಜನೇಯ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಚಿತ್ರದುರ್ಗ ಬಿಜೆಪಿ ಸಂಸದರಾದ ಗೋವಿಂದ ಕಾರಜೋಳ, ಚಿಕ್ಕಮಗಳೂರು ಕ್ಷೇತ್ರದ ಶಾಸಕರಾದ ತಮ್ಮಯ್ಯ ಸೇರಿದಂತೆ ಮಠದ ಭಕ್ತರು, ಅನೇಕ ಗಣ್ಯರು ಭಾಗವಹಿಸಿದ್ದರು.
