ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ ಕುರಿತು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯು ತೀರ್ಪನ್ನು ಹೈಕೋಟ್೯ ಇಂದು ಮಧ್ಯಾಹ್ನ 12ಗಂಟೆಗೆ ಪ್ರಕಟಿಸಲಿದೆ.
ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳು ಸೇರಿ ಎರಡು ಕಡೆಯ ವಾದವನ್ನು ಆಲಿಸಿ ವಿಚಾರಣೆ ಮುಕ್ತಾಯಗೊಳಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕ ಸದಸ್ಯ ಪೀಠ ಇಂದು ತೀರ್ಪು ಪ್ರಕಟಿಸಲಿದ್ದು ಎಲ್ಲರ ಚಿತ್ತ ರಾಜ್ಯಹೈಕೋರ್ಟ್‌ನತ್ತ ನೆಟ್ಟಿದೆ.
ಸಿದ್ದರಾಮಯ್ಯ ಅವರ ಪತ್ನಿ ಮುಡಾದಿಂದ ಅಕ್ರಮವಾಗಿ 14 ಸೈಟ್‌ಗಳನ್ನು ಪಡೆದಿರುವ ಆರೋಪವಿದೆ. ಇದೇ ಪ್ರಕರಣ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದಿಟ್ಟಿದೆ. ಸಾವಿರಾರು ಪುಟಗಳ ದಾಖಲೆ, 6 ದಿನಗಳ ಸುದೀರ್ಘ ವಾದ ಮಂಡನೆ ಆಲಿಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ತೀರ್ಪು ಪ್ರಕಟಕ್ಕೆ ಮುಹೂರ್ತ ಫಿಕ್ಸ್ ಮಾಡಿದೆ. ಇಂದು ಮಧ್ಯಾಹ್ನ 12 ಗಂಟೆ ವೇಳೆಗೆ ತೀರ್ಪು ಪ್ರಕಟಿಸಲಿದೆ.