ಬೆಂಗಳೂರು: ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದ್ದು, ಅದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗುತ್ತದೆ. ವಿರೋಧ ಪಕ್ಷಗಳ ಷಡ್ಯಂತ್ರಕ್ಕೆ ಬೆದರಿ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಬಿಜೆಪಿ ನಾಯಕರ ವಿರುದ್ಧ ಯಾವ ಯಾವ ಪ್ರಕರಣಗಳಿವೆ. ತನಿಖೆಗಳು ಯಾವ ಹಂತದಲ್ಲಿವೆ ಎಂಬೆಲ್ಲ ಅಂಶಗಳು ರಾಜ್ಯದ ಜನತೆಗೆ ಗೊತ್ತಿದೆ. ಹೀಗಿದ್ದೂ, ರಾಜ್ಯಪಾಲರು ರಾಜಕೀಯ ಕೈಗೊಂಬೆಯಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.
ಹೈಕೋರ್ಟ್ ಆದೇಶವನ್ನು ವಿಭಾಗೀಯ ಪೀಠದಲ್ಲಿ ಪ್ರಶ್ನಿಸಲಾಗುತ್ತದೆ. ಯಾವುದೇ ಕಾರಣಕ್ಕೂ ಸಿಎಂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ, ಪಕ್ಷ ಮತ್ತು ಎಲ್ಲಾ ನಾಯಕರು ಸಿಎಂ ಬೆನ್ನಿಗಿದ್ದೇವೆ ಎಂದರು.

