ರಾಜಕೀಯ ಸುದ್ದಿ

ಮೂಡಾ ಪ್ರಕರಣದ ಅರ್ಜಿ ವಜಾ ಹಿನ್ನೆಲೆ; ನಾಳೆ ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆ

Share It

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಸಂಬಂಧಿಸಿದಂತೆ ತನಿಖೆಗೆ ತನ್ನ ವಿರುದ್ಧ ರಾಜ್ಯಪಾಲರು ನೀಡಿರುವ ಅನುಮತಿಯನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ಮಂಗಳವಾರ ವಜಾಗೊಳಿಸಿದ ಹಿನ್ನೆಲೆ ಸಿಎಂ‌ ಸಿದ್ದರಾಮಯ್ಯ ಬುಧವಾರ ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

ಸಭೆಯಲ್ಲಿ ಮುಂದೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ. ಶಾಸಕಾಂಗ ಪಕ್ಷದ ಸಭೆ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಮಧ್ಯಾಹ್ನ 12:30ಕ್ಕೆ ವಿಧಾನಸೌಧದಲ್ಲಿ ಸಚಿವ ಸಂಪುಟ ನಡೆಸಲಿದ್ದಾರೆ.

ರಾಜ್ಯಪಾಲರು ಬೇರೆ ಬೇರೆ ಪ್ರಕರಣಗಳಲ್ಲಿ ವರದಿ ಕೇಳಿ ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರಗಳಿಗೆ ಹೇಗೆ ಉತ್ತರ ಕೊಡಬೇಕೆಂಬುವುದರ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.

ಹೈಕೋರ್ಟ್​ ತೀರ್ಪು ಬರುತ್ತಿದ್ದಂತೆ ಕರ್ನಾಟಕ ಕಾಂಗ್ರೆಸ್​ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಇಲ್ಲಿ, ಮುಖಂಡರೊಂದಿಗೆ ಸಭೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.


Share It

You cannot copy content of this page