ಬೆಂಗಳೂರು: ಕರ್ನಾಟಕದಲ್ಲಿ ತನಿಖೆ ನಡೆಸಲು ಸಿಬಿಐಗೆ ಇದ್ದ ಮುಕ್ತ ಅವಕಾಶವನ್ನು ವಾಪಸ್ ಪಡೆಯಲು ಸರಕಾರ ತೀರ್ಮಾನಿಸಿದೆ.
ಸಚಿವ ಸಂಪುಟದಲ್ಲಿ ಈ ಕುರಿತು ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು, ಕೇಂದ್ರ ಸರಕಾರ ಸಿಬಿಐ ಅನ್ನು ಅಸ್ತ್ರವಾಗಿ ಬಳಸುತ್ತಿದೆ. ಅಗತ್ಯವಿದ್ದರೆ ಮಾತ್ರ ಸಿಬಿಐ ತನಿಖೆಗೆ ಕೊಡಲು ತೀರ್ಮಾನಿಸಲಾಗಿದೆ ಎಂದು ಉಲ್ಲೇಖಿಸಲಾಗಿದೆ.
ಹಿಂದಿನ ಯಾವುದೇ ಪ್ರಕರಣದ ತನಿಖೆಯಲ್ಲಿ ಸಿಬಿಐ ಪೂರ್ವಾಗ್ರಹ ಪೀಡಿತವಾಗಿ ಕೆಲಸ ಮಾಡುತ್ತಿದೆ. ಚುನಾವಣೆಯಲ್ಲಿ ಒಂದು ಪಕ್ಷದ ಕಚೇರಿ ಮೇಲೆ ದಾಳಿ ನಡೆಸಿದ್ದು ನೋಡಿದ್ದೇವೆ. ಹೀಗಾಗಿ, ಸಿಬಿಐ ತನಿಖೆಗೆ ಇದ್ದ ಮುಕ್ತ ಅವಕಾಶವನ್ನು ನಿರ್ಬಂಧಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆ ಸಡಿಲಗೊಳಿಸುವ ಪ್ರಯತ್ನವನ್ನು ಕೇಂದ್ರ ಸರಕಾರ ನಡೆಸುತ್ತಿದೆ. ಹೀಗಾಗಿ, ಅದನ್ನು ಹತ್ತಿಕ್ಕುವ ಪ್ರಯತ್ನವನ್ನು ನಾವು ಮಾಡಿದ್ದೆವೆ ಎಂದು ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.