ಡಿ.29ಕ್ಕೆ ಕೆಪಿಎಸ್ಸಿ ಮರು ಪರೀಕ್ಷೆ
ಬೆಂಗಳೂರು: ಡಿ.29ರಂದು ಗಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಡಿ.29ರಂದು ಪೂರ್ವಭಾವಿ ಪರೀಕ್ಷೆಯನ್ನು ಮತ್ತೆ ನಡೆಸಲು ಕೆಪಿಎಸ್ಸಿ ಮುಂದಾಗಿದೆ.
ಅ.27ರಂದು ಕೆಪಿಎಸ್ಸಿ ಪೂರ್ವಭಾವಿ ಪರೀಕ್ಷೆ ನಡೆಸಿತ್ತು. ಆದರೆ, ಪ್ರಶ್ನೆಪತ್ರಿಕೆ 1 ಮತ್ತು 2ರಲ್ಲಿನ ಪ್ರಶ್ನೆಗಳನ್ನು ಇಂಗ್ಲಿಷ್ ನಿಂದ ಕನ್ನಡಕ್ಕೆ ಅನುವಾದ ಮಾಡಿದಾಗ ಹಲವು ತಪ್ಪುಗಳು ಒದ್ದವು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ಮರು ಪರೀಕ್ಷೆಗೆ ಆಗ್ರಹಿಸಿದ್ದರು.
ಎರಡು ತಿಂಗಳೊಳಗೆ ಮರು ಪರೀಕ್ಷೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಅವರು ಕೆಪಿಎಸ್ಸಿಗೆ ಸೂಚನೆ ನೀಡಿದ್ದರು. 384 ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಯಲಿದ್ದು, ಅದರಂತೆ ಡಿ.29ರಂದು ಪರೀಕ್ಷೆ ನಡೆಯಲಿದೆ.


