ರಾಜಕೀಯ ಸುದ್ದಿ

ನಾನು ತಪ್ಪು ಮಾಡಿಲ್ಲ, ರಾಜೀನಾಮೆ ಕೊಡಲ್ಲ: ಸಿದ್ದರಾಮಯ್ಯ

Share It

ಮೈಸೂರು: ರಾಜ್ಯಪಾಲರು ಆಡಳಿತದಲ್ಲಿ ತಲೆಹಾಕಬಾರದು, ರಾಜ್ಯಪಾಲರ ಯಾವ ಪತ್ರಗಳಿಗೂ ಸಿಎಸ್ ಉತ್ತರಿಸಬಾರದು. ಎಲ್ಲಾ ಕಡೆಯು ಸಿಬಿಐ, ಇಡಿ, ರಾಜ್ಯಪಾಲರ ಕಚೇರಿ ದುರ್ಬಳಕೆ ಆಗುತ್ತಿದೆ ಎಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಮೈಸೂರಿನ ಮಂಡಕಳ್ಳಿ ಏರ್ ಪೋರ್ಟ್ ನಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ರಾಜಭವನ ದುರ್ಬಳಕೆಯಾಗುತ್ತಿದೆ. ನನ್ನ ರಾಜೀನಾಮೆ ಕೇಳಲು ಬಿಜೆಪಿಗೆ ಯಾವ ನೈತಿಕತೆ ಇದೆ. ನಾನು ತಪ್ಪು ಮಾಡಿಲ್ಲ. ಹೀಗಾಗಿ ರಾಜೀನಾಮೆ ಕೊಡಲ್ಲ ಎಂದು ಸ್ಪಷ್ಟಪಡಿಸಿದರು.

ಜನರು ನಮಗೆ 5ವರ್ಷ ಅಧಿಕಾರ ನಡೆಸಿ ಅಭಿವೃದ್ಧಿ ಮಾಡಿ ಎಂದು ಅಧಿಕಾರ ನೀಡಿದ್ದಾರೆ. ನಾನು ಯಾಕೆ ರಾಜೀನಾಮೆ ಕೊಡಬೇಕು. ತಪ್ಪು ಮಾಡಿದ್ದರೇ ಮಾತ್ರ ರಾಜೀನಾಮೆ ಕೊಡಬೇಕು. ಗೋದ್ರಾ ಗಲಭೆ ಆಗಿದ್ದಾಗ ಮೋದಿ ರಾಜೀನಾಮೆ ನೀಡಿದ್ದರಾ?

ಎಫ್ ಐಆರ್ ಆಗಿ ಜಾಮೀನು ಪಡೆದಿರುವ ಎಚ್ಡಿಕೆ ಯಾಕೆ ರಾಜೀನಾಮೆ ಕೊಟ್ಟಿಲ್ಲ. ನಾನು ತಪ್ಪು ಮಾಡಿಲ್ಲ. ರಾಜೀನಾಮೆ ಕೊಡಲ್ಲ. ನನ್ನ ರಾಜೀನಾಮೆ ಕೇಳುವ ನೈತಿಕತೆ ಅವರಿಗಿದೆಯಾ? ನಾನು ಕಾನೂನು‌ ಹೋರಾಟ ಮಾಡುತ್ತೇನೆ ಎಂದರು.


Share It

You cannot copy content of this page