ನಾಗಮಂಗಲ ಗಲಭೆ ಆರೋಪಿಗಳಿಗೆ ಜಾಮೀನು ಮಂಜೂರು
ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದಿದ್ದ ಕೋಮುಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ 55 ಆರೋಪಿಗಳಿಗೆ ಮಂಡ್ಯ 1ನೇ ಜಿಲ್ಲಾ & ಸೆಷನ್ಸ್ ಕೋರ್ಟ್ನಿಂದ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.
ಸೋಮವಾರ ಆರೋಪಿಗಳನ್ನು ಬಿಡುಗಡೆ ಮಾಡಲಿದ್ದಾರೆ. ಸೆ. 11ರಂದು ಆರೋಪಿಗಳನ್ನು ಬಂಧಿಸಲಾಗಿತ್ತು.
ನಾಗಮಂಗಲದಲ್ಲಿ ಗಣೇಶನ ಮೂರ್ತಿ ವಿಸರ್ಜನೆ ವೇಳೆ ಕೋಮುಗಲಭೆ ಉಂಟಾಗಿ ನಾಗಮಂಗಲ ಹೊತ್ತಿ ಉರಿದಿತ್ತು. ಕಿಡಿಗೇಡಿಗಳು ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ಹಚ್ಚಿದ್ದರು.


