ಬೆಂಗಳೂರು: ಚುನಾವಣಾ ಬಾಂಡ್ ಹಗರಣಕ್ಕೆ ಸಂಬಂದಿಸಿದಂತೆ ನ್ಯಾಯಾಲಯದ ಆದೇಶದ ಅನ್ವಯ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಆದರ್ಶ್ ಅಯ್ಯರ್ ಎಂಬುವವರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿದ್ದು, ನಿರ್ಮಲಾ ಸೀತಾರಾಮನ್ ಅವು ಎ 1 ಆರೋಪಿಯಾಗಿದ್ದಾರೆ. ಇಡಿ ಇಲಾಖೆಯನ್ನು ಎ 2 ಆಗಿ, ಕೇಂದ್ರ ಬಿಜೆಪಿ ನಾಯಕರು ಎ 3, ನಳೀನ್ ಕುಮಾರ್ ಕಟೀಲ್ ಎ 4 ಮಾಡಲಾಗಿದೆ.
ಸಿದ್ದರಾಮಯ್ಯ ವಿರುದ್ಧ ಮೂಡಾ ತನಿಖೆಗೆ ಆಗ್ರಹಿಸಿ, ರಾಜೀನಾಮೆಗೆ ಒತ್ತಾಯಿಸುತ್ತಿದ್ದ ರಾಜ್ಯ ಬಿಜೆಪಿಗೆ ನಿರ್ಮಲಾ ಸೀತಾರಾಮನ್ ಪ್ತಕರಣದ ಬಹುದೊಡ್ಡ ಹಿನ್ನಡೆಯಾಗಿದೆ. ಇದೀಗ ಕೇಂದ್ರ ಸಚಿವೆ ರಾಜೀನಾಮೆ ಕೊಡ್ತಾರಾ ಎಂದು ಪ್ರಾಸ್ನೆ ಮಾಡುತ್ತಿರುವ ಕಾಂಗ್ರೆಸ್ ನಾಯಕರು, ಈ ಪ್ರಕರಣವನ್ನು ಬಿಜೆಪಿ ವಿರುದ್ಧ ಅಸ್ತ್ರವಾಗಿ ಬಳಸಲು ಸಿದ್ಧವಾಗಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ಎಲೆಕ್ಟ್ರಾಲ್ ಬಾಂಡ್ ಗಳ ಮೂಲಕ ಸುಮಾರು ಎಂಟು ಸಾವಿರ ಕೋಟಿ ರು.ಗಳ ಅವ್ಯವಹಾರ ನಡೆದಿದೆ ಎಂಬ ಆರೋಪ ಬಿಜೆಪಿ ನಾಯಕರ ಮೇಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನೇ ಪ್ರಮುಖ ಆರೋಪಿಯನ್ನಾಗಿಸಿ ದೂರು ದಾಖಲು ಮಾಡಲಾಗಿದೆ.
ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ನಾಯಕರ ವಿರುದ್ಧ ತಬಿಖೆ ನಡೆಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಅನುಮತಿ ಸಿಕ್ಕಿದ್ದು, ಇದೀಗ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣದ ಎಲ್ಲ ಆರೋಪಿಗಳಿಗೆ ನೊಟೀಸ್ ನೀಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.