ಇಂದೋರ್: ಕಲ್ಲು ತುಂಬಿದ್ದ ಟ್ರಕ್ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಸ್ ನಲ್ಲಿದ್ದ 6 ಜನ ಮೃತಪಟ್ಟಿದ್ದು, 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ನಾದನ್ ದೇಹತ್ ಪ್ರದೇಶದಲ್ಲಿ ನಡೆದಿರುವ ಘಟನೆಯಲ್ಲಿ ಉತ್ತರ ಪ್ರದೇಶದಿಂದ ಮಹಾರಾಷ್ಟ್ರಕ್ಕೆ ಬರುತ್ತಿದ್ದ ಬಸ್ ಸಂಪೂರ್ಣವಾಗಿ ನಿಜ್ಜುಗುಜ್ಜಾಗಿದೆ. ಬಸ್ ನಲ್ಲಿದ್ದ ಆರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ.
ಗಾಯಗೊಂಡಿರುವ ಪ್ರಯಾಣಿಕರ ಆಕ್ರಂದನ ಮುಗಿಲು ಮುಟ್ಟಿದೆ. ಅವರನ್ನೆಲ್ಲ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಕಲ್ಲು ತುಂಬಿದ್ದ ಭಾರಿ ಟ್ರಕ್ ವೊಂದಕ್ಕೆ ಬಸ್ ಡಿಕ್ಕಿ ಹೊಡೆದಿದೆ.
ಮೃತರು ಉತ್ತರ ಪ್ರದೇಶದ ಪ್ರಯಾಗ್ ರಾಜ್ ಗೆ ತೆರಳಿದ್ದ ಮಹಾರಾಷ್ಟ್ರದ ನಾಗಪುರ ಮೂಲದ ಪ್ರಯಾಣಿಕರು ಎನ್ನಲಾಗಿದೆ. ಮಧ್ಯಪ್ರದೇಶ ಆಡಳಿತ ಮಹಾರಾಷ್ಟ್ರ ಸರಕಾರದ ಜತೆಗೆ ಸಂಪರ್ಕ ಸಾಧಿಸಿ, ಮೃತರ ಶವಗಳನ್ನು ಮಹಾರಾಷ್ಟ್ರಕ್ಕೆ ಕಳುಹಿಸಿಕೊಡುವ ವ್ಯವಸ್ಥೆ ಮಾಡಿದೆ.