ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನಾಲ್ಕು ತಂಡಗಳ ರಚನೆ
ಮೈಸೂರು:ಮೂಡಾ ಹಗರಣದಲ್ಲಿ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ನಾಲ್ಕು ತಂಡಗಳನ್ನು ರಚನೆ ಮಾಡಿದ್ದು, ಸೋಮವಾರದಿಂದ ತನಿಖೆ ಚುರುಕುಗೊಳ್ಳಲಿದೆ.
ಮೈಸೂರು ಲೋಕಾಯುಕ್ತಕ್ಕೆ ನ್ಯಾಯಾಲಯದ ತನಿಖೆಗೆ ಆದೇಶ ನೀಡಿರುವ ಬೆನ್ನಲ್ಲೇ ನಾಲ್ಕು ತಂಡಗಳ ರಚನೆ ಮಾಡಲಾಗಿದೆ. ಈ ತಂಡಗಳು ಸಿಎಂ ಸಿದ್ದರಾಮಯ್ಯ ಸೇರಿದಂತೆ ಪ್ರಕರಣದ ಇನ್ನಿತರ ಆರೋಪಿಗಳ ತನಿಖೆ ನಡೆಸಲಿದ್ದಾರೆ.
ಸಿಎಂ ಸಿದ್ದರಾಮಯ್ಯ, ಸಿದ್ದರಾಮಯ್ಯ ಪತ್ನಿ ಪಾರ್ವತಿ, ಭಾಮೈದ ಮಲ್ಲಿಕಾರ್ಜುನ, ಮೂಡಾದ ಅಂದಿನ ಅಧ್ಯಕ್ಷ ಮರೀಗೌಡ ಸೇರಿದಂತೆ ಇನ್ನಿತರರನ್ನು ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ.
ಈ ನಡುವೆ ಸಿಎಂ ಕಾನೂನು ತಂಡ ಕಾನೂನು ಹೋರಾಟಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ಗೆ ಅಥವಾ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮನವಿ ಸಲ್ಲಿಸುವ ಕುರಿತು ಚರ್ಚೆ ನಡೆಯುತ್ತಿದೆ.


