ಸುದ್ದಿ

ಹಾಸನ: ಪೊಲೀಸ್ ಸಂಕೀರ್ಣದ ಕಟ್ಟಡದ ಮೇಲಿಂದ ಬಿದ್ದು ವ್ಯಕ್ತಿಯೊಬ್ಬ ಆತ್ಮಹತ್ಯೆ

Share It

ಹಾಸನ: ನಗರದ ಹೃದಯ ಭಾಗದಲ್ಲಿರುವ ಪೊಲೀಸ್ ಸಂಕೀರ್ಣದ ಕಟ್ಟಡದ ಮೇಲಿಂದ ಬಿದ್ದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಸಂಜೆ ನಡೆದಿದೆ.

ಹೊಳೆನರಸೀಪುರ ತಾಲೂಕಿನ ದೊಡ್ಡ ಕಾರ್ಡನೂರು ಸಮೀಪದ ಮಲ್ಲೇನಹಳ್ಳಿ ಗ್ರಾಮದ ಸುನಿಲ್ (30) ಎಂಬಾತ ಮೃತಪಟ್ಟವ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಟ್ಟಡದ ಮೇಲಿಂದ ಬಿದ್ದ ಸುನಿಲ್ ತಲೆಯ ಭಾಗ ಮತ್ತು ಮುಖಕ್ಕೆ ಗಂಭೀರ ಗಾಯಗಳಾಗಿತ್ತು. ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಆತನನ್ನು ನಗರದ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

ಈ ಬಗ್ಗೆ ಮೃತನ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share It

You cannot copy content of this page