ನಮ್ಮ ಹೋರಾಟಕ್ಕೆ ಸಿಕ್ಕ ಜಯ: ಆರ್.ಅಶೋಕ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಜಯ್ಯ ಅವರ ಪತ್ನಿ ಹೆಸರಲ್ಲಿ ಪಡೆದಿರುವ 14ಸೈಟುಗಳನ್ನು ಹಿಂತಿರುಗಿಸುವ ನಿರ್ಧಾರ ಮಾಡಿರುವುದು ನಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದು ಪ್ರತಿ ಪಕ್ಷದ ನಾಯಕ ಆರ್.ಅಶೋಕ್ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.
ಸಂವಿಧಾನ ರಕ್ಷಿಸಲು ದಿಟ್ಟ ನಿರ್ಧಾರ ಕೈಗೊಂಡ ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ ಎಂದಿದ್ದಾರೆ.
ಸಿಎಂ ಸಿದ್ದರಾಮಯ್ಯನವರು ತಮ್ಮ ಪತ್ನಿ ಹೆಸರಿನಲ್ಲಿ ಅಕ್ರಮವಾಗಿ ಪಡೆದಿದ್ದ ಸೈಟುಗಳನ್ನು ವಾಪಸ್ಸು ನೀಡುವ ‘ದೊಡ್ದ’ ಮನಸ್ಸು ಮಾಡಿರುವುದು, ಸಂವಿಧಾನವನ್ನ ರಕ್ಷಿಸಲು ದಿಟ್ಟ ನಿರ್ಧಾರ ಕೈಗೊಂಡ ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ. ರಾಜ್ಯಪಾಲರ ನಿರ್ಧಾರವನ್ನ ಎತ್ತಿ ಹಿಡಿದ ನ್ಯಾಯಾಂಗಕ್ಕೆ ಸಿಕ್ಕ ದೊಡ್ಡ ಜಯ. ಜಗ್ಗಲ್ಲ, ಬಗ್ಗಲ್ಲ ಎಂದು ಅಧಿಕಾರದ ಮದದಿಂದ ಮೆರೆಯುತ್ತಿದ್ದವರ ವಿರುದ್ಧ ಬಾಬಾಸಾಹೇಬ್ ಅಂಬೇಡ್ಕರರ ಸಂವಿಧಾನಕ್ಕೆ ಸಿಕ್ಕ ದೊಡ್ಡ ಜಯ ಎಂದು ಉಲ್ಲೇಖಿಸಿದ್ದಾರೆ.
ಆದರೆ ‘ಅಡಿಕೆಗೆ ಹೋದ ಮಾನ, ಆನೆ ಕೊಟ್ಟರೂ ಬರುವುದಿಲ್ಲ’ ಸಿಎಂ ಸಿದ್ದರಾಮಯ್ಯನವರೇ. ತಾವು ತನಿಖೆ ಎದುರಿಸಲೇ ಬೇಕು. ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಗಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲೇ ಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿರಂತರವಾಗಿ ಮುಂದುವರೆಯುತ್ತದೆ.


