ಗಾಂಧಿಯವರ ಕನಸಿನಂತೆ ಗ್ರಾಮಗಳ ಅಭಿವೃದ್ಧಿಗೆ ಹಲವು ಯೋಜನೆ: ಸಿದ್ದರಾಮಯ್ಯ
ಬೆಂಗಳೂರು: ಗ್ರಾಮಗಳ ಉದ್ದಾರ ಆಗದೇ ದೇಶ ಅಭಿವೃದ್ಧಿ ಅಗದು ಎಂದು ರಾಜ್ಯ ಸರ್ಕಾರ ಹಲವು ಜನಾಭಿವೃದ್ಧಿ ಯೋಜನೆಗಳನ್ನು ರೂಪಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಕಿ ಬುಬಿಎಂಪಿ ಆಯೋಜಿಸಿದ್ದ ಮಹತ್ಮಾ ಗಾಂಧಿಯವರ ಜನ್ಮ ದಿನಾಚರಣೆ ಮತ್ತು ಸ್ವಚ್ಛತಾ ಆಂದೋಲನಾ ಪ್ರತಿಜ್ಞೆ ವಿಧಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಂವಿಧಾನದ ಆಶಯಗಳನ್ನು ಈಡೇರಿಸುವ ಸಾಮಾಜಿಕ, ಆರ್ಥಿಕ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಸರ್ಕಾರ ರೂಪಿಸಿದ್ದಯ, ನಮ್ಮ ಗ್ಯಾರಂಟಿ ಕಾರ್ಯಕ್ರಮಗಳೂ ಕೂಡ ಬಡವರಿಗೆ ಸ್ವಾತಂತ್ರ್ಯ ಒದಗಿಸಿದಂತಾಗಿದೆ ಎಂದರು.
ಆತ್ಮ ಸಾಕ್ಷಿಯ ನ್ಯಾಯಾಲಯ ಎಲ್ಲಾ ನ್ಯಾಯಾಲಯಗಳಿಗಿಂತ ಮಿಗಿಲಾದದು, ಆದ್ದರಿಂದ ನಾವು ಆತ್ಮ ಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳುವುದೇ ಗಾಂಧಿಯವರಿಗೆ ನಾವು ಸಲ್ಲಿಸುವ ಗೌರವವಾಗಿದೆ ಎಂದರು.
ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಲಕ್ಷ್ಮಿ ಹೆಬ್ಬಳ್ಕಾರ್, ಎಚ್.ಪಾಟೀಲ್, ಮಾಜಿ ಮುಖ್ಯಮಂತ್ರಿ ವಿರಪ್ಪ ಮೊಯಿಲಿ, ಬಿಬಿಎಂಪಿ ಆಯುಕ್ತ ತುಷಾರದ ಗಿರಿನಾಥ್, ಸಾಧು ಕೊಕಿಲಾ ಇದ್ದರು.


