ಹಿರಿಯೂರು: ಹಿರಿಯೂರಿನ ವಾಣಿವಿಲಾಸ ಸಾಗರ ಜಲಾಶಯದಿಂದ ಹೊಳಲ್ಕೆರೆ ತಾಲ್ಲೂಕಿನ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು ಪೂರೈಸಲು 367 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ತಿಳಿಸಿದ್ದಾರೆ.
ಹೊಳಲ್ಕೆರೆಯಲ್ಲಿ ಕೆರೆ ಅಭಿವೃದ್ಧಿ ಯೋಜನೆಗೆ ಪೂಜೆ ನೆರವೇರಿಸಿದ ಶಾಸಕ ಎಂ.ಚಂದ್ರಪ್ಪ ಮಾತನಾಡಿ, ವಾಣಿವಿಲಾಸ ಸಾಗರದ ಮಧ್ಯೆ 40 ಅಡಿ ಆಳದಲ್ಲಿ ಪಿಲ್ಲರ್ ಹಾಕಿ ಮೋಟಾರ್ ಕೂರಿಸಿ 60 ಕೋಟಿ ರೂಪಾಯಿ ವೆಚ್ಚದಲ್ಲಿ ಪಿಲ್ಲರ್ ಅಳವಡಿಸಲಾಗಿದೆ ಎಂದರು.