ಬೆಂಗಳೂರು: ಮೂರು ಕೋಟಿ ರು. ಗೂ ಅಧಿಕ ಮೌಲ್ಯದ ಗಾಂಜಾ ಬೆಳೆದಿದ್ದ ಜಮೀನಿನ ಮೇಲೆ ಪೊಲೀಸರು ದಾಳಿ ನಡೆಸಿ ಗಾಂಜಾ ಬೆಳೆ ನಾಶಗೊಳಿಸಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.
ಬೀದರ್ ಎಸ್.ಪಿ. ಪ್ರದೀಪ್ ಗುಂಟೆ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದ ಜಮೀನಿನಲ್ಲಿ ಬೆಳೆದಿದ್ದ ಮೂರು ಕೋಟಿ ರುಮ ಮೌಲ್ಯದ ಗಾಂಜಾ ಬೆಳೆಯನ್ನು ನಾಶಗೊಳಿಸಲಾಗಿದೆ.
ಮಹಾರಾಷ್ಟ್ರ ಮೂಲ್ ಬಸವರಾಜ್ ಎಂಬ ರೈತನ ಜಮೀನಿನಲ್ಲಿ ಸುಮಾರು ಮೂರು ಅಡಿ ಉದ್ದದ ಗಾಂಜಾ ಗಿಡಗಳನ್ನು ಬೆಳೆಯಲಾಗಿತ್ತು. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.