ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಮುರುಘಾಶ್ರೀ ಬಿಡುಗಡೆ

Share It

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾಶ್ರೀ ಅವರನ್ನು ಬಿಡುಗಡೆ ಮಾಡಲು ನ್ಯಾಯಾಲಯ ಆದೇಶ ಹೊರಡಿಸಿದೆ.

ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಂಡ ಹಿನ್ನೆಲೆ ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶವನ್ನು ಹೊರಡಿಸಿದೆ.
ಈ ಹಿಂದೆ ಹೈಕೋರ್ಟ್ ಮುರುಘಾಶ್ರೀಗೆ ಜಾಮೀನು ನೀಡಿತ್ತು. ಆದರೆ, ಸಾಕ್ಷ ವಿಚಾರಣೆ ನಡೆಸುವವರೆಗೆ ಬಂಧನದಲ್ಲಿಡಲು ಸುಪ್ರೀಂಕೋರ್ಟ್​ ಆದೇಶಿಸಿತ್ತು.

ಇದೀಗ, ಸಂತ್ರಸ್ತೆಯರಿಬ್ಬರು ಸೇರಿದಂತೆ 12 ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದ್ದು, ಮುರುಘಾಶ್ರೀ ಬಿಡುಗಡೆಗೆ ನ್ಯಾಯಾಲಯ ಆದೇಶಿಸಿದೆ.
ಕೋರ್ಟ್‌ನಿಂದ ಜಿಲ್ಲಾ ಕಾರಾಗೃಹಕ್ಕೆ ತೆರಳಿ ಬಳಿಕ‌ ಮುರುಘಾಶ್ರೀ ಬಿಡುಗಡೆಯಾಗಲಿದ್ದಾರೆ. ಬಿಡುಗಡೆ ಬಳಿಕ ಶ್ರೀಗಳು ಚಿತ್ರದುರ್ಗ ಜೈಲಿನಿಂದ ದಾವಣಗೆರೆಗೆ ತೆರಳಲಿದ್ದಾರೆ.


Share It

You May Have Missed

You cannot copy content of this page