ಬೆಂಗಳೂರು: ಬಿಜೆಪಿ ಅವಧಿಯಲ್ಲಿ ನಡೆದಿರುವ ಕೋವಿಡ್ ಅಕ್ರಮಗಳ ತನಿಖಾ ವರದಿಯ ಅನುಷ್ಠಾನಕ್ಕೆ ರಚನೆ ಮಾಡಿರುವ ಸಂಪುಟ ಉಪಸಮಿತಿ ಅಧ್ಯಕ್ಷರಾಗಿ ಡಿಸಿಎಂ ಡಿ. ಕೆ.ಶಿವಕುಮಾರ್ ಅವರನ್ನು ನೇಮಿಸಲಾಗಿದೆ.
ಗುರುವಾರ ಬೆಳಗ್ಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಉಪಸಮಿತಿ ರಚನೆ ಮಾಡುವ ಕುರಿತು ತೀರ್ಮಾನ ಕೈಗೊಳ್ಳಲಾಗಿತ್ತು. ಇದೀಗ ಸಮಿತಿ ರಚನೆ ಮಾಡಿ ಡಿ.ಕೆ.ಶಿವಕುಮಾರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಸಮಿತಿಯಲ್ಲಿ ಗೃಹಸಚಿವ ಡಾ. ಜಿ. ಪರಮೇಶ್ವರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಚ್.ಕೆ. ಪಾಟೀಲ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕಾರ್ಮಿಕ ಸಚಿವ ಸಂತೋಷ್ ಲಾಡ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ಇದ್ದಾರೆ.