ಚಂಡೀಗಢ : ಇದೇ ಅಕ್ಟೋಬರ್ 17 ರಂದು ಪಂಚಕುಲದಲ್ಲಿ ಹರ್ಯಾಣದ ಹೊಸ ಬಿಜೆಪಿ ಸರ್ಕಾರದ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ, ಹಿರಿಯ ಬಿಜೆಪಿ ನಾಯಕರು ಮತ್ತು ಇತರ ಕೆಲವು ರಾಜ್ಯಗಳ ಮುಖ್ಯಮಂತ್ರಿಗಳು ಅಕ್ಟೋಬರ್ 17 ರಂದು ನಡೆಯಲಿರುವ ಹರ್ಯಾಣ ರಾಜ್ಯದ ನೂತನ ಮುಖ್ಯಮಂತ್ರಿಯ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಇದೇ ಅಕ್ಟೋಬರ್ 17 ರಂದು ಪಂಚಕುಲ ಸೆಕ್ಟರ್ 5ರ ದಸರಾ ಮೈದಾನದಲ್ಲಿ ಬೆಳಗ್ಗೆ 10 ಗಂಟೆಗೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.