ರಾಜಕೀಯ ಸುದ್ದಿ

ಸಿಎಂ ರಾಜಿನಾಮೆ ನೀಡಿ ತನಿಖೆ ಎದುರಿಸಲಿ: ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಒತ್ತಾಯ

Share It

ಮೈಸೂರು: ನಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಾಗ ನಾವೂ ರಾಜೀನಾಮೆ ನೀಡಿ ತನಿಖೆ ಎದುರಿಸಿದ್ದೆವು. ಇದೀಗ ನೀವೂ ರಾಜೀನಾಮೆ ನೀಡಿ, ತನಿಖೆ ಎದುರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಒತ್ತಾಯಿಸಿದರು.

ನನ್ನ ಮೇಲೆ ಆರೋಪ ಕೇಳಿ ಬಂದಾಗಲೂ ನಾನು ರಾಜೀನಾಮೆ ನೀಡಿದ್ದೆ. ಸಿದ್ದರಾಮಯ್ಯ ಕೂಡ ಈಗ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ನನ್ನ ಮೇಲೆ ತನಿಖೆ ಆಗಿತ್ತು. ಕ್ಲಿನ್ ಚಿಟ್ ಕೂಡ ಸಿಕ್ಕಿತ್ತು. ಈಗ ಸಿಎಂ ಸಿದ್ದರಾಮಯ್ಯ ವಿರುದ್ಧವೇ ಆರೋಪ ಕೇಳಿ ಬಂದಿದೆ. ಈಗೇಕೆ ರಾಜೀನಾಮೆ ನೀಡುತ್ತಿಲ್ಲ?… ನಿಮಗೊಂದು ಕಾನೂನು ನನಗೊಂದು ಕಾನೂನು ಇದೆಯಾ? ನನ್ನ ವಿರುದ್ಧ ನೀವೇ ಹೋರಾಟ ಮಾಡಿದ್ದಿರಿ. ಸಿಎಂ ಡಬಲ್ ಸ್ಟ್ಯಾಂಡ್ ತಕೋಬೇಡಿ. ರಾಜೀನಾಮೆ ಕೊಟ್ಟು ತನಿಖೆ ಎದುರಿಸಿ. ಕ್ಲಿನ್ ಚಿಟ್ ಸಿಕ್ಕರೆ ಮತ್ತೆ ಸಿಎಂ ಆಗಿ ಎಂದು ಹೇಳಿದರು.

ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ದಂಪತಿ ಚಾಮುಂಡಿ ಬೆಟ್ಟದ ದೇವಸ್ಥಾನಕ್ಕೆ ಬೇಟಿ ನೀಡುತ್ತಿದ್ದು, ಪೂಜೆ ಸಲ್ಲಿಸಿ ಹಣೆಗೆ ಕುಂಕುಮ ಇಟ್ಟುಕೊಳ್ಳುತ್ತಿದ್ದಾರೆ. ಆದರೆ, ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸುವ ಸಿದ್ದರಾಮಯ್ಯ, ದೇವಸ್ಥಾನ ಧ್ವಂಸ ಮಾಡುವವರ ಮೇಲಿನ ಕೇಸ್ ಹಿಂಪಡೆದಿರುವುದು ದುರಾದೃಷ್ಟಕರ ಸಂಗತಿ ಎಂದು ತಿಳಿಸಿದರು.

ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಆರೆಸ್ಸೆಸ್ ಅನ್ನು ಟೀಕಿಸುತ್ತಾರೆ. ದೇಶದ ರಕ್ಷಣೆ ದೇಶ ಸೇವೆ ಮಾಡುತ್ತಿರುವುದು ಆರ್ ಎಸ್ಎಸ್. ಈ ಆರ್’ಎಸ್ಎಸ್ ಬಗ್ಗೆ ಟೀಕೆ ಮಾಡಿ ಮಾಡಿ ಕಾಂಗ್ರೆಸ್ ನಿರ್ನಾಮ ಆಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಸಂಗೊಳ್ಳಿ ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಮಾಡಬೇಕು ಎಂಬ ಕೂಗು ಕೇಳಿ ಬರುತ್ತಿದೆ. ಅಂತಿಮ ತೀರ್ಮಾನ ಆಗಿಲ್ಲ. ಬಾಗಲಕೋಟೆಯಲ್ಲಿ ಸಮಾವೇಶ ಮಾಡುತ್ತಿದ್ದೇವೆ. ಈ ಸಮಾವೇಶಕ್ಕೆ ಮೃತ್ಯುಂಜಯ ಸ್ವಾಮಿ ಸೇರಿ ಹಲವರು ಬರುತ್ತಿದ್ದಾರೆ ಎಂದರು.


Share It

You cannot copy content of this page