ಉಪಯುಕ್ತ ಸುದ್ದಿ

ರಾಜಧಾನಿಯ ವರುಣಾರ್ಭಟ: ಬೆಂಗಳೂರಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

Share It

ಬೆಂಗಳೂರು; ರಾಜಧಾನಿ ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಅನೇಕ ಅನಾಹುತ ಗಳು ಸೃಷ್ಡಿಯಾಗುತ್ತಿರುವ ಹಿನ್ನೆಲೆಯಲ್ಲಿ ನಗರ ಜಿಲ್ಲೆ ವ್ಯಾಪ್ತಿಯ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಮಂಗಳವಾರ ಇಡೀ ದಿನ ಬೆಂಗಳೂರಿನಲ್ಲಿ ಭಾರಿ ಮಳೆ ಸುರಿದಿದೆ. ಈ ಮಳೆಗೆ ಗಂಟೆಗಟ್ಟಲೆ ಟ್ರಾಫಿಕ್ ಜಾಮ್, ಅನೇಕ ಕಡೆ ಮರಬಿದ್ದು ಅನಾಹುತ ಮತ್ತು ನೀರುನುಗ್ಗಿ ಅವಾಂತರಗಳು ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಇಂತಹ ನಿರ್ಧಾರ ತೆಗೆದುಕೊಂಡಿದೆ.

ಜಿಲ್ಲಾಡಳಿತ ಹೊರಡಿಸಿರುವ ಆದೇಶದಲ್ಲಿ ಮಳೆಯ ಕಾರಣದಿಂದ ಅ.16 ಮತ್ತು ಅ.17 ರಂದು ನಗರದಲ್ಲಿ ಅರೇಂಜ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ನಗರದ ಅಂಗನವಾಡಿ ಮತ್ತು ಖಾಸಗಿ ಅನುದಾನಿತ ಶಾಲೆಗಳಿಗೆ ಬುಧವಾರ ರಜೆ ಘೋಷಿಸಲಾಗಿದೆ ಎಂದು ತಿಳಿಸಿದೆ.

ಅ.17 ರವರೆಗೆ ನಗರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ರಜೆಯನ್ನು ಗುರುವಾರಕ್ಕೂ ಮುಂದುವರಿಸಬೇಕಾ ಅಥವಾ ಬೇಡವಢ ಎಂಬುದನ್ನು ಮಳೆಯ ಪ್ರಮಾಣ ನೋಡಿಕೊಂಡು ನಿರ್ಧರಿಸಲು ಜಿಲ್ಲಾಡಳಿತ ತೀರ್ಮಾನಿಸಿದೆ.


Share It

You cannot copy content of this page