ಅಪರಾಧ ರಾಜಕೀಯ ಸುದ್ದಿ

ಮುನಿರತ್ನಗೆ ಬಿಡುಗಡೆಯ ಭಾಗ್ಯ: ಜಾಮೀನು ನೀಡಿದ ಜನಪ್ರತಿನಿಧಿಗಳ ನ್ಯಾಯಾಲಯ

Share It

ಬೆಂಗಳೂರು: ಅತ್ಯಾಚಾರ ಆರೋಪದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರ್.ಆರ್.ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ.

ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಪ್ರಕರಣದಡಿ ಸೆ.೨೧ರಂದು ಕಗ್ಗಲಿಪುರ ಪೊಲೀಸರು ಮುನಿರತ್ನರನ್ನು ಬಂಧಿಸಿದ್ದರು. ವಿಚಾರಣೆಯ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಈ ಸಂಬAಧ ಸಲ್ಲಿಸಿದ್ದ ಜಾಮೀನು ಅರ್ಜಿಯ ಆದೇಶವನ್ನು ನ್ಯಾಯಾಲಯ ಮಂಗಳವಾರಕ್ಕೆ ಕಾಯ್ದಿರಿಸಿತ್ತು.

ಇಂದು ಆದೇಶ ಹೊರಡಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಮುನಿರತ್ನಗೆ ಜಾಮೀನು ನೀಡಿದೆ. ಆದೇಶದ ಪ್ರತಿ ಸಂಜೆ ೬ ಗಂಟೆಯೊಳಗೆ ಜೈಲಾಧಿಕಾರಿಗಳಿಗೆ ತಲುಪಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಬುಧವಾರ ಮುನಿರತ್ನ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಅತ್ಯಾಚಾರ ಪ್ರಕರಣದ ಇತರೆ ಆರೋಪಿಗಳಾದ ರೋಹಿತ್, ಕಿರಣ್ ಹಾಗೂ ಮಂಜುನಾಥ್ ಎಂಬವರಿಗೆ ನ್ಯಾಯಾಲಯ ನಿನ್ನೆ ನಿರೀಕ್ಷಣಾ ಜಾಮೀನು ನೀಡಿತ್ತು.

ಅತ್ಯಾಚಾರ ಪ್ರಕರಣ ದಾಖಲಾಗುವ ಮುನ್ನ ಬಿಬಿಎಂಪಿ ಗುತ್ತಿಗೆದಾರ ಹಾಗೂ ಮಾಜಿ ಪಾಲಿಕೆ ಸದಸ್ಯ ನೀಡಿದ್ದ ದೂರುಗಳ ಮೇರೆಗೆ ಜೀವ ಬೆದರಿಕೆ ಹಾಗೂ ಜಾತಿನಿಂದನೆಯಡಿ ವೈಯ್ಯಾಲಿಕಾವಲ್ ಠಾಣೆ ಪೊಲೀಸರು ಪ್ರತ್ಯೇಕ ಎಫ್‌ಐಆರ್ ದಾಖಲಿಸಿ ಮುನಿರತ್ನ ಅವರನ್ನು ಮುಳಬಾಗಿಲಿನ ನಂಗಲಿ ಚೆಕ್‌ಪೋಸ್ಟ್ ಬಳಿ ಬಂಧಿಸಿದ್ದರು.ಆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬರುತ್ತಿದ್ದಂತೆ ಅತ್ಯಾಚಾರ ಪ್ರರಕರಣ ದಾಖಲಾಗಿತ್ತು.


Share It

You cannot copy content of this page