ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಹಲವೆಡೆ ಉತ್ತಮ ಮಳೆಯಾಗುತ್ತಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ಮೈಸೂರು, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕಲಬುರಗಿ, ಕಲಬುರಗಿ, ಬೀದರ್, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಬಾಗಲಕೋಟೆಯಲ್ಲಿ ಮಳೆಯಾಗಲಿದೆ. ಪಣಂಬೂರು, ಚಿಕ್ಕೋಡಿ, ಬೇಗೂರು, ರಾಯಲ್ಪಾಡು, ಗೌರಿಬಿದನೂರು, ತೊಂಡೇಭಾವಿ, ದಕ್ಷಿಣ ಕನ್ನಡ, ಸುಳ್ಯ, ಸೇಡಬಾಳ, ಚಿಕ್ಕಬಳ್ಳಾಪುರ, ಸಿರಾ, ನಾಪೋಕ್ಲು, ರಾಮನಗರ, ಶಿವಮೊಗ್ಗ, ಚಿಂತಾಮಣಿಯಲ್ಲಿ ಮಳೆಯಾಗಿದೆ.
ಪೊನ್ನಂಪೇಟೆ, ಮಾಗಡಿ, ಬೆಂಗಳೂರು ನಗರ, ಗುಬ್ಬಿ, ಸರಗೂರು, ಮಾಣಿ, ಹೊನ್ನಾವರ, ಬೆಳ್ತಂಗಡಿ, ರಬಕವಿ, ಧರ್ಮಸ್ಥಳ, ಕಾರ್ಕಳ, ನಿಪ್ಪಾಣಿ, ಮಧುಗಿರಿ, ಎಚ್ಡಿ ಕೋಟೆ, ಹೊಸದುರ್ಗ, ಭಾಗಮಂಡಲ, ಚಿತ್ರದುರ್ಗ, ಪರಶುರಾಂಪುರ, ಚನ್ನಪಟ್ಟಣ, ತಿಪಟೂರಿನಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 18.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

