ಅಪರಾಧ ರಾಜಕೀಯ ಸುದ್ದಿ

ಚುನಾವಣೆಯಲ್ಲಿ ಟಿಕೆಟ್ ಕೊಡಿಸುವ ನೆಪದಲ್ಲಿ ಮೋಸ: ಪ್ರಹ್ಲಾದ್ ಜೋಷಿ ಸಹೋದರನ ವಿರುದ್ಧ ಎಫ್‌ಐಆರ್

Share It

ಬೆಂಗಳೂರು: ಮೂಡಾ ಇಟ್ಟುಕೊಂಡು ಸರಕಾರ ಬೀಳಿಸುವ ಪ್ರಯತ್ನ ನಡೆಸುತ್ತಿರುವ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದೆ. ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ, ವಂಚಿಸಿದ ಆರೋಪದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸಹೋದರನ ವಿರುದ್ಧವೇ ಎಫ್‌ಐಆರ್ ದಾಖಲಾಗಿದೆ.

ವಿಜಯಪುರ ಜಿಲ್ಲೆಯ ನಾಗಠಾಣಾ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕ ದೇವಾನಂದ್ ಚೌಹ್ಹಾಣ್ ಅವರಿಗೆ 2 ಕೋಟಿ ರು.ಹಣ ಪಡೆದು ವಂಚಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಈ ಸಂಬಂಧ ದೇವಾನಂದ್ ಪುಲ್ ಸಿಂಗ್ ಚವ್ಹಾಣ್ ಪತ್ನಿ ಸುನಿತಾ ಚವ್ಹಾಣ್ ದೂರು ನೀಡಿದ್ದು, ದೂರಿನ ಮೇರೆಗೆ ಬಸವೇಶ್ವರನಗರ ಠಾಣೆ ಪೊಲೀಸರು, ಗೋಪಾಲ್ ಜೋಶಿ ಹಾಗೂ ಅವರ ಪುತ್ರ ಅಜಯ್ ಜೋಶಿ ವಿರುದ್ಧ ವಂಚನೆ ಹಾಗೂ ಜಾತಿ ನಿಂದನೆ ಆರೋಪದಡಿ ಎಫ್‌ಐಆರ್ ದಾಖಲಿಸಿದ್ದಾರೆ.

ಇದೀಗ ಮೂಡಾ ಹಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಣೀಯಲು ಮುಂದಾಗಿದ್ದ ಬಿಜೆಪಿಗೆ ಸ್ವತಃ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಸಹೋದರನ ವಿರುದ್ಧವೇ ಆರೋಪ ಕೇಳಿಬಂದಿರುವುದು ಮುಜುಗರಕ್ಕೆ ಕಾರಣವಾಗಲಿದೆ.

ಕಾಂಗ್ರೆಸ್ ಇದೀಗ ಕೇಂದ್ರ ಸಚಿವರ ರಾಜೀನಾಮೆಗೆ ಆಗ್ರಹಿಸಲು ಆರಂಭಿಸಿದ್ದಾರೆ. 2 ಕೋಟಿ ವಂಚನೆ ಆರೋಪವಾಗಿರುವ ಕಾರಣ ಜೋಷಿ ರಾಜೀನಾಮೆ ನೀಡಬೇಕು ಎಂಬುದು ಕಾಂಗ್ರೆಸ್‌ನ ಒತ್ತಾಯವಾಗಿದೆ. ಆ ಮೂಲಕ ಮೂಡಾ ವಿಚಾರದಲ್ಲಿ ಬಿಜೆಪಿ ಬಾಯಿಮುಚ್ಚಿಸಲು ಕಾಂಗ್ರೆಸ್‌ಗೆ ಅಸ್ತçವೊಂದು ಸಿಕ್ಕಂತಾಗಿದೆ.


Share It

You cannot copy content of this page