ಅಪರಾಧ ಸುದ್ದಿ

ನವಲಗುಂದ: ಮನೆಯ ಮೇಲ್ಚಾವಣಿ ಕುಸಿದು ಅತ್ತೆ ಸೊಸೆಗೆ ಗಂಭೀರ ಗಾಯ:ಆಸ್ಪತ್ರೆಗೆ ದಾಖಲು

Share It

ನವಲಗುಂದ: ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಮೇಲ್ಚಾವಣಿ ಕುಸಿದು, ಮನೆಯಲ್ಲಿದ್ದ ಅತ್ತೆ ಮತ್ತು ಸೊಸೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನವಲಗುಂದ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಹಣಸಿ ಗ್ರಾಮದಲ್ಲಿ ಮಳೆ ಸುರಿಯುತ್ತಿರುವ ಕಾರಣಕ್ಕೆ ಮನೆಯ ಮೇಲ್ಚಾವಣಿ ಕುಸಿದಿದೆ. ಈ ವೇಳೆ ಮನೆಯಲ್ಲಿದ್ದ ಅತ್ತೆ ಸುವರ್ಣಾ ಪಾಟೀಲ್ ಹಾಗೂ ಸೊಸೆ ಮಂಗಳಾ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮನೆಯಲ್ಲಿದ್ದ ಬಹುತೇಕ ವಸ್ತುಗಳ ಹಾನಿಗೊಳಗಾಗಿವೆ.

ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ತಲೆ ಮತ್ತು ಹೊಟ್ಟೆಯ ಭಾಗದಲ್ಲಿ ಇಬ್ಬರಿಗೂ ಗಂಭೀರವಾಗಿ ಗಾಯವಾಗಿದ್ದು, ಚಿಕಿತ್ಸೆ ಕೊಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಘಟನೆಯ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿದ್ದು, ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸುವ ಮತ್ತು ಮನೆ ಮಾಲೀಕರಿಗೆ ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ. ಶಾಸಕ ಕೋನರೆಡ್ಡಿ ಕೂಡ ಗಾಯಾಳುಗಳ ಕುಟುಂಬಕ್ಕೆ ಕರೆ ಮಾಡಿ ಧೈರ್ಯ ತುಂಬಿದ್ದಾರೆ.


Share It

You cannot copy content of this page