ಬೆಳಗಾವಿ: ಲೋಕಸಭೆ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ₹2 ಕೋಟಿ ಸುಲಿಗೆ ನಡೆಸಿದ್ದ ಆರೋಪದ ಅಡಿ ದಾಖಲಾಗಿದ್ದ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಲ್ಲಾದ ಜೋಶಿ ಅವರ ಅಣ್ಣ ಹಾಗೂ ಅಣ್ಣನ ಪುತ್ರನನ್ನು ಬಸವೇಶ್ವರನಗರ ಠಾಣೆ ಪೊಲೀಸರು ಶನಿವಾರ ಮಧ್ಯಾಹ್ನ ಬಂಧಿಸಿದ್ದಾರೆ.
ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿದೆ.
ಪ್ರಲ್ಲಾದ ಜೋಶಿ ಅವರ ಅಣ್ಣ ಗೋಪಾಲ ಜೋಶಿ ಅವರನ್ನು ಕೊಲ್ಲಾಪುರದಲ್ಲಿ ಹಾಗೂ ಗೋಪಾಲ ಅವರ ಪುತ್ರ ಅಜಯ್ ಜೋಶಿ ಅವರನು ಪುಣೆಯಲ್ಲಿ ಬಂಧಿಸಲಾಗಿದೆ. ಇಬ್ಬರನ್ನು ಹುಬ್ಬಳ್ಳಿಗೆ ಕರೆತಂದು ತನಿಖೆ ನಡೆಸುವ ಸಾಧ್ಯತೆ ಇದೆ.
ಈ ನಡುವೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿ ನನಗೂ ಮತ್ತು ನನ್ನ ಅಣ್ಣನ ವ್ಯವಹಾರಕ್ಕೆ ಯಾವುದೇ ಸಂಬಂಧ ಇಲ್ಲ ನಾನು ಮತ್ತು ನನ್ನ ಅಣ್ಣ 32 ವರ್ಷಗಳಿಂದ ಪ್ರತ್ಯೇಕವಾಗಿ ಇದ್ದೇವೆ. ಅವರು ವಂಚನೆ ನಡೆಸಿದ್ದರೆ ಕ್ರಮ ಜರುಗಿಸಲಿ ಎಂದು ಒತ್ತಾಯಿಸಿದ್ದನ್ನು ಇಲ್ಲಿ ಸ್ಮರಿಸಬಹುದು.