ಚಾಮರಾಜನಗರ: ವಿದ್ಯುತ್ ತಂತಿ ತಗುಲಿ ಬೈಕ್ ನಲ್ಲಿ ಹೋಗುತ್ತಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಮೃತಪಟ್ಟವರನ್ನು ತಾಲೂಕಿನ ಅಯ್ಯನಪುರ ಗ್ರಾಮದ ನಿವಾಸಿಗಳಾದ ನಾಗೇಂದ್ರ (48) ಮತ್ತು ಮಲ್ಲೇಶ್ (40)ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ದ್ವಿಚಕ್ರ ವಾಹನದಲ್ಲಿ ಅಯ್ಯನಪುರ-ಹಿತ್ತಲಗುಡ್ಡೆ ರಸ್ತೆಯಲ್ಲಿ ತೆರಳುತ್ತಿದ್ದಾಗ, ಮಳೆಗೆ ವಿದ್ಯುತ್ ಕಂಬದ ಕೆಳಭಾಗದಲ್ಲಿ ಜೋತುಕೊಂಡಿದ್ದ ತಂತಿ ತಗುಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.
ಸ್ಥಳಕ್ಕೆ ಪೂರ್ವ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಚೆಸ್ಕಾಂ ವತಿಯಿಂದ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಮೃತರ ಸಂಬಂಧಿಕರು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ.