ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಪೊಲೀಸರು ನಡೆಸಿದ ಶೋಧ ಕಾರ್ಯಾಚರಣೆ ನಡೆಸಿ ಸ್ಮಾರ್ಟ್‌ಫೋನ್ ಮತ್ತಿತರ ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಂಡು ನಾಲ್ವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತ ಎಸ್.ಡಿ. ಶರಣಪ್ಪ ತಿಳಿಸಿದ್ದಾರೆ.
ಕಲಬುರ್ಗಿಯ ಕೇಂದ್ರ ಕಾರಾಗೃಹದಲ್ಲಿ ಶೋಧ ನಡೆಸಲಾಗಿದ್ದು, ಸ್ಮಾರ್ಟ್‌ಫೋನ್, ಒಂದು ಬೇಸಿಕ್ ಹ್ಯಾಂಡ್‌ಸೆಟ್ ಮತ್ತಿತರ ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಕೇಂದ್ರ ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಗಿದೆ. ಅಲ್ಲದೇ ನಾಲ್ವರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದರು.
ಅಕ್ರಮವಾಗಿ ವಸ್ತು ಪೂರೈಕೆ ಮಾಡುತ್ತಿದ್ದ ಜೈಲಿನ ಕೈದಿಗಳನ್ನು ಗುರುತಿಸಲಾಗಿದ್ದು, ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗುವುದು. ಅವರು ಯಾರಿಗೆ ಸರಬರಾಜು ಮಾಡುತ್ತಿದ್ದರು ಎಂಬುದನ್ನು ಗುರುತಿಸಲಾಗುದೆ. ಆತನನ್ನೂ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಕ್ರಿಮಿನಲ್ ಗಳು ಜೈಲಿನ ಆವರಣಕ್ಕೆ ನಿಷಿದ್ಧ ವಸ್ತುಗಳು ಮತ್ತಿತರ ವಸ್ತುಗಳನ್ನು ಎಸೆಯುತ್ತಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ. ಈ ಸಂಬಂಧ ಎರಡು ಪ್ರಕರಣ ದಾಖಲಾಗಿದೆ.
2022 ರಲ್ಲಿ ಜೈಲಿಗೆ ಮೂರು ಮೊಬೈಲ್ ಹ್ಯಾಂಡ್‌ಸೆಟ್‌ಗಳನ್ನು ಎಸೆದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು. ಈ ವರ್ಷದ ಮತ್ತೊಂದು ಪ್ರಕರಣದಲ್ಲಿ ಜೈಲಿನ ಒಳಗೆ ಒಂದು ಮೊಬೈಲ್ ಫೋನ್, ಚೀನಾ ಮೊಬೈಲ್ ಹ್ಯಾಂಡ್‌ಸೆಟ್ ಮತ್ತು ಎಂಟು ಗಾಂಜಾ ಪ್ಯಾಕೆಟ್ ಎಸೆದಿದ್ದ ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.