ಬೆಂಗಳೂರು: KSRTC ಮತ್ತಷ್ಟು ಹೈಟೆಕ್ ಬಸ್ಸುಗಳನ್ನು ಕಾರ್ಯಾಚರಣೆ ಮಡೆಸಲು ಸಿದ್ಧವಾಗಿದ್ದು, ಐರಾವತ ಕ್ಲಬ್ ಕ್ಲಾಸ್ 2.0 ಬಸ್ಸಗಳು ನಾಳೆ ಲೋಕಾರ್ಪಣೆಗೊಳ್ಳಲಿವೆ.
ಅ.30 ರ ಬುಧವಾರ ಬೆಳಿಗ್ಗೆ 11 ಗಂಟೆಗೆ ವಿಧಾನಸೌಧ (ಗ್ರ್ಯಾಂಡ್ ಸ್ಟೆಪ್ಸ್) ಮುಂಭಾಗದಲ್ಲಿ ಐರಾವತ ಕ್ಲಬ್ ಕ್ಲಾಸ್ 2.0 (ವೋಲ್ವೋ -9600) 20 ಬಸ್ಸುಗಳನ್ನು ಸಾರ್ವಜನಿಕರ ಸೇವೆಯ ಕಾರ್ಯಾಚರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, KSRTC ಅಧ್ಯಕ್ಷ ಶ್ರೀನಿವಾಸ್ ಹಾಗೂ ಉಪಾಧ್ಯಕ್ಷ ಮಹಮದ್ ರಿಜ್ವಾನ್ ನವಾಬ್ ಉಪಸ್ಥಿತರಿರಲಿದ್ದಾರೆ. ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರಂಭದಲ್ಲಿ ಸಚಿವರು, ಸಂಸದರು, ಶಾಸಕರು ಹಾಗೂ ಇತರೆ ಗಣ್ಯರು ಭಾಗವಹಿಸಲಿದ್ದಾರೆ.