ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಚಿತ್ರತಂಡದಿಂದ ನೂರಾರು ಮರಗಳಿಗೆ ಕತ್ತರಿಬಿದ್ದಿದ್ದು, ಚಿತ್ರತಂಡದ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ ಕೇಳಿಬಂದಿದೆ.
ಪೀಣ್ಯದ ಎಚ್ ಎಂಟಿ ಲೇಔಟ್ ನಲ್ಲಿರುವ ಅರಣ್ಯ ಪ್ರದೇಶದಲ್ಲಿ ನೂರಾರು ಮರಗಳನ್ನು ಕತ್ತರಿಸಿ ಟಾಕ್ಸಿಕ್ ಚಿತ್ರದ ಶೂಟಿಂಗ್ ಸೆಟ್ ಹಾಕಲು ತೀರ್ಮಾನಿಸಲಾಗಿದೆ. ಇದಕ್ಕೆ ಸಂಬಂದಿಸಿ ಗೂಗಲ್ ಮ್ಯಾಪ್ ಬದಲಾವಣೆ ಕಂಡು ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸರಕಾರಕ್ಕೆ ಸಾರ್ವಜನಿಕ ವಲಯದಿಂದ ಒತ್ತಡ ಕೇಳಿಬಂದಿದೆ.
ಸ್ವಯಃ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಚಿತ್ರ ತಂಡದ ನಡೆಯ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ಅರಣ್ಯ ಕತ್ತರಿಸಲು ಅನುಮತಿ ನೀಡಿದ ಬಿಬಿಎಂಪಿ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದಾರೆ. ಅರಣ್ಯ ನಾಶವನ್ನು ಸಹಿಸುವುದಿಲ್ಲ ಎಂದು ಗುಡುಗಿದ್ದಾರೆ.
ಟಾಕ್ಸಿಕ್ ಚಿತ್ರ ತಂಡ ಮತ್ತು ಯಶೋ ಮಾರ್ಗದ ಮೂಲಕ ಪರಿಸರ ಉಳಿಸುವ ಕೆಲಸ ಮಾಡಿದ್ದ ಯಶ್ ಅವರ ನಡೆಯನ್ನು ಪರಿಸರ ಪ್ರೇಮಿಗಳು ಖಂಡಿಸಿದ್ದಾರೆ. ಜತೆಗೆ, ಮರ ಕಡಿಯಲು ಅನುಮತಿ ನೀಡಿದ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲು ಆಗ್ರಹಿಸಿದ್ದಾರೆ.