ಬೆಳಗಾವಿ: ಬೆಳಗಾವಿ ಜಿಲ್ಲಾ ಉದಯವಾಣಿ ದಿನಪತ್ರಿಕೆ ಹಿರಿಯ ವರದಿಗಾರ ಭೈರೋಬಾ ಶಿವಾಜಿ ಕಾಂಬಳೆ ಅವರಿಗೆ ಬೆಳಗಾವಿ ಜಿಲ್ಲಾಡಳಿತದ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ನೀಡುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ನೀಡುವ ಈ ಪ್ರಶಸ್ತಿಯನ್ನು ಜಿಲ್ಲಾಡಳಿತದ ವತಿಯಿಂದ ನ.1 ರಂದು ಬೆಳಗ್ಗೆ 10.30 ಕ್ಕೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ.
ಬೆಳಗಾವಿ ತಾಲೂಕು ಸುಳೇಭಾವಿ ಗ್ರಾಮದ ಬಡ ಕುಟುಂಬದ ಭೈರೋಬಾ ಅವರು ಎಂಎ ಪದವೀಧರರಾಗಿದ್ದು ಕಳೆದ 15 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ವಿವಾದಗಳಿಂದ ಸದಾ ದೂರ ಇದ್ದು ಅತ್ಯಂತ ಸ್ನೇಹ ವ್ಯಕ್ತಿತ್ವ ಹೊಂದಿದ ಪತ್ರಕರ್ತರಾಗಿ ಗುರುತಿಸಿಕೊಂಡಿದ್ದಾರೆ.
ಪತ್ರಿಕೋದ್ಯಮದ ಆರಂಭದಲ್ಲಿ ಲೋಕದರ್ಶನ ದಿನಪತ್ರಿಕೆ, ಇದೀಗ 2011 ರಿಂದ ನಾಡಿನ ಪ್ರತಿಷ್ಠಿತ ಉದಯವಾಣಿ ದಿನಪತ್ರಿಕೆಯ ಹಿರಿಯ ವರದಿಗಾರರಾಗಿ ಅವರು ತಮ್ಮ ಶ್ರೇಷ್ಠ ಬರಹದ ಮೂಲಕ ಗುರುತಿಸಿಕೊಂಡಿದ್ದಾರೆ.
ರಾಜಕೀಯ ವಿಶ್ಲೇಷಣೆಗಳು, ಅಪರಾಧ ಸುದ್ದಿಗಳು ಸೇರಿದಂತೆ ಬಹುಮುಖಿ ಪತ್ರಿಕೋದ್ಯಮದಲ್ಲಿ ವಿಶೇಷ ವರದಿಗಳ ಮೂಲಕ ಅವರು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕ್ರಿಯಾಶೀಲ ಪತ್ರಕರ್ತರಾಗಿ ಗುರುತಿಸಿಕೊಂಡಿದ್ದಾರೆ.