ಛೇ…ಇವನೆಂಥಾ ಕಾಮುಕ:ತನ್ನ ಅಜ್ಜಿ ಮೇಲೆಯೇ ಅತ್ಯಾಚಾರ ನಡೆಸಿದ 25 ವರ್ಷದ ಯುವಕ
ಬೆಂಗಳೂರು : ತನ್ನ ಸ್ವಂತ ಅಜ್ಜಿಯನ್ನೇ ಬಲವಂತವಾಗಿ ಅತ್ಯಾಚಾರ ಮಾಡಲು 25 ವರ್ಷದ ಯುವಕನೊಬ್ಬ ಯತ್ನಿಸಿದ ಘಟನೆ ಉತ್ತರ ಪ್ರದೇಶದ ಶಹಜಾಹಾನ್ ಪುರ ಗ್ರಾಮಾಂತರ ಪ್ರದೇಶದಲ್ಲಿ ನಡೆದಿದೆ.
ಗುರುವಾರ ರಾತ್ರಿ ವಯೋವೃದ್ಧೆಯೊಬ್ಬರು ತಮ್ಮ ಮನೆಯಲ್ಲಿ ಮಲಗಿದ್ದರು. ಈ ವೇಳೆ 25 ವರ್ಷದ ಮೊಮ್ಮಗ ಆಕೆಯನ್ನು ಕೋಣೆಗೆ ಎಳೆದೊಯ್ದು ಅತ್ಯಾಚಾರ ನಡೆಸಿದ್ದಾನೆ. ಯಾರಿಗಾದರೂ ಹೇಳಿದ್ದೇಯಾದರೆ ಕೊಲೆ ಮಾಡುತ್ತೇನೆ ಎಂದು ಬೆದರಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಆರೋಪಿ ಪರಾರಿಯಾಗಿದ್ದು, ಸಂತ್ರಸ್ತೆಯ ದೂರಿನ ಅನ್ವರ ಆತನ ಮೇಲೆ ಶಹಜಾಹಾನ್ ಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.
ಸಂತ್ರಸ್ತೆಯ ನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದು, ಅತ್ಯಾಚಾರ ಮತ್ತು ಕೊಲೆ ಬೆದರಿಕೆ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.


