ಚಾರ್ಮಾಡಿ ಘಾಟ್‌ ಹೆದ್ದಾರಿ ದ್ವಿಪಥಗೊಳಿಸಲು ಕೇಂದ್ರದಿಂದ 343.74 ಕೋಟಿ ರೂ. ಬಿಡುಗಡೆ: ಸಂಸದ ಕ್ಯಾ. ಚೌಟ

Share It

ಮಂಗಳೂರು: ಚಾರ್ಮಾಡಿ ಘಾಟ್‌ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ಮಂಗಳೂರಿನಿಂದ ಮೂಡಿಗೆರೆಯಾಗಿ ತುಮಕೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-73ರ ಚಾರ್ಮಾಡಿ ಘಾಟಿಯಲ್ಲಿ 75 ಕಿ.ಮೀ ನಿಂದ 86.20 ಕಿ.ಮೀ. ಅಂತರದವರೆಗೆ ಅಭಿವೃದ್ಧಿಯಾಗಲಿದೆ. ಆ ಮೂಲಕ ಚಾರ್ಮಾಡಿ ಘಾಟ್ ಪ್ರದೇಶದ ರಸ್ತೆಯು ದ್ವಿಪಥವಾಗಿ ಅಗಲೀಕರಣಗೊಳ್ಳಲಿದೆ. ಈ ಹೆದ್ದಾರಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಕೂಡ ಪೂರ್ಣಗೊಂಡಿದೆ ಎಂದು ಸಂಸದರು ಹೇಳಿದ್ದಾರೆ.

ರಾಜ್ಯದ ಪ್ರಮುಖ ಹೆದ್ದಾರಿಯಾದ ಚಾರ್ಮಾಡಿ ಘಾಟ್‌ನ್ನು ಮೇಲ್ದರ್ಜೆಗೇರಿಸುವುದರಿಂದ ಕರಾವಳಿ ಭಾಗದ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಜತೆಗೆ ಸುಗಮ ಸರಕು ಸಾಗಾಣೆಯೊಂದಿಗೆ ಈ ಭಾಗದ ವ್ಯಾಪಾರ-ವಹಿವಾಟು ಕೂಡ ವೃದ್ಧಿಸಲಿದೆ.

ಆ ಮೂಲಕ, ಕರ್ನಾಟಕದ ವಾಣಿಜ್ಯ ಹೆಬ್ಬಾಗಿಲು ಎಂದು ಗುರುತಿಸಿಕೊಂಡಿರುವ ಕರಾವಳಿ ಮತ್ತಷ್ಟು ಪ್ರಗತಿ ಪಥದಲ್ಲಿ ಮುನ್ನಡೆಯಲಿದೆ. ಹೀಗಾಗಿ, ಚಾರ್ಮಾಡಿ ಘಾಟ್‌ ಹೆದ್ದಾರಿ ದ್ವಿಪಥಗೊಳಿಸಲು 343,74,00,000 ರೂ. ಬಿಡುಗಡೆಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.


Share It

You May Have Missed

You cannot copy content of this page