ರಾಜ್ಯ ಪೊಲೀಸರ ಮೇಲೆ ರಾಜಕೀಯ ಪ್ರಭಾವ :ನೇಹಾ ಕೊಲೆ ಪ್ರಕರಣ ಸಿಬಿಐಗೆ ಹಸ್ತಾಂತರಿಸಿ
ಹುಬ್ಬಳ್ಳಿ: ರಾಜ್ಯ ಪೊಲೀಸರ ಮೇಲೆ ರಾಜಕೀಯ ಪ್ರಭಾವ ಹೆಚ್ಚಾಗುತ್ತಿದ್ದು, ಪೊಲೀಸರು ಅಸಹಾಯಕರಾಗುತ್ತಿದ್ದಾರೆ. ಹೀಗಾಗಿ ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಇಂದು ಹನುಮ ಜಯಂತಿ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಅಶೋಕನಗರದ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಣ ಪೂಜೆ ಸಲ್ಲಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೇಹಾ ತಂದೆ ನಿರಂಜನ ಹಿರೇಮಠ ಅವರು ರಾಜ್ಯ ಸರ್ಕಾರದ ಪೊಲೀಸರ ಮೇಲೆ ನಂಬಿಕೆ ಇಲ್ಲ ಎಂದಿದ್ದಾರೆ. ಹೀಗಾಗಿ ಪ್ರಕರಣ ಸಿಬಿಐಗೆ ಹಸ್ತಾಂತರ ಮಾಡಬೇಕು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲವೇ ಇಲ್ಲ. ಪೊಲೀಸ್ ಠಾಣೆಗಳು ಸೆಟ್ಲಮೆಂಟ್ ಸೆಂಟರ್ ಆಗಿವೆ. ರಾಜಕಾರಣಿಗಳು ಪೊಲೀಸರ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಪೊಲಿಸರು ಅಸಹಾಯಕರಾಗುತ್ತಿದ್ದಾರೆ ಎಂದರು.
ಬಿಜೆಪಿಯವರಿಗೆ ಹಿಂದುಗಳ ಕೊಲೆಯಾಗದೆ ಖುಷಿ ಎಂಬ ಸಚಿವ ಸಂತೋಷ ಲಾಡ್ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ನೇಹಾ ಹಿರಮೇಠ ಅವರನ್ನು ಒಂದು ಜಾತಿಗೆ ಸಿಮೀತ, ಮಾಡಬೇಡಿ. ಕಾಂಗ್ರೆಸ್ ಪಾಲಿಕೆ ಸದಸ್ಯರಿಗೆ ರಕ್ಷಣೆ ಕೊಡಲು ಆಗಿಲ್ಲ. ಹಾಡ ಹಗಲೇ ಬೆಳೆದು ಬಾಳಬೇಕಾದ ಯುವತಿಯ ಕೊಲೆ ಆಗಿದೆ. ಕಾಂಗ್ರೆಸ್ ನವರು ಎಲ್ಲದರಲ್ಲೂ ರಾಜಕೀಯ ಮಾಡುತ್ತಾರೆ ಎಂದು ಆರೋಪಿಸಿದರು.
ಕೆಪಿ ನಂಜುಡಿ ರಾಜೀನಾಮೆ ಕುರಿತು ಕೇಳಿದ ಪ್ರಶ್ನೆಗೆ ಅದು ಪರಿಣಾಮ ಬೀರುವುದಿಲ್ಲ ಅವರು ಕಾಂಗ್ರೆಸ್ ನಲ್ಲಿದ್ರು ಬಿಜೆಪಿಗೆ ಬಂದಿದ್ದರು. ಹೀಗಾಗಿ ರಾಜೀನಾಮೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.