ಉಪಚುನಾವಣೆ: ಇಂದು ಬಹಿರಂಗ ಪ್ರಚಾರ ಅಂತ್ಯ

Share It

ಬೆಂಗಳೂರು: ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳ ಉಪಚುನಾಣೆಯ ಬಹಿರಂಗ ಪ್ರಚಾರ ಇಂದು ಸಂಜೆ 6 ಗಂಟೆಗೆ ಅಂತ್ಯವಾಗಲಿದೆ.

ಶಿಗ್ಗಾಂವಿಯಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ ಖಾನ್ ಪಠಾಣ್ ಪರ ಪ್ರಚಾರ ಸಭೆ ನಡೆಸಲಿದ್ದಾರೆ.
ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಂಸದ ಬಸವರಾಜ ಬೊಮ್ಮಾಯಿ, ಜಗದೀಶ ಶೆಟ್ಟರ್ ಪ್ರಚಾರ ನಡೆಸಲಿದ್ದಾರೆ.

ಸಂಡೂರು ಹಾಗೂ ಚನ್ನಪಟ್ಟಣದಲ್ಲೂ ಅಭ್ಯರ್ಥಿಗಳು ಹಾಗೂ ರಾಜಕೀಯ ನಾಯಕರು ಮತ ಯಾಚಿಸುತ್ತಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮತದಾರರಲ್ಲದವರು ಇಂದು ಸಂಜೆ 5.30ರ ನಂತರ ಕ್ಷೇತ್ರ ಬಿಟ್ಟುಹೋಗುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಮನೆ ಮನೆಗೆ ತೆರಳಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಅವಕಾಶವಿದೆ. ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ನಡೆಯಲಿದೆ. ನವೆಂಬರ್ 23ರಂದು ಫಲಿತಾಂಶ ಹೊರಬೀಳಲಿದೆ.


Share It

You May Have Missed

You cannot copy content of this page