ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೆ ಕೊನೆಗೂ ಸರಕಾರ ಮುಂದಾಗಿದ್ದು, ಈ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತ್ರತ್ವದಲ್ಲಿ ಆಯೋಗ ರಚನೆ ಮಾಡಿದೆ.
ಪರಿಶಿಷ್ಟ ಜಾತಿಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಒಳಮೀಸಲಾತಿ ನೀಡುವ ಸಂಬಂಧ ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ಸಭೆಯ ತೀರ್ಮಾನದಂತೆ ಇದೀಗ ನ್ಯಾ. ನಾಗ್ ಮೋಹನ್ ದಾಸ್ ನೇತೃತ್ವದ ಆಯೋಗ ರಚನೆ ಮಾಡಲಾಗಿದೆ.
ಸಮಿತಿಯು ಒಳ ಮೀಸಲಾತಿ ಜಾರಿಗೆ ಸಂಬಂಧಿಸಿ ಕೈಗೊಳ್ಳಬಹುದಾದ ಶಿಫಾರಸ್ಸುಗಳನ್ನು ರಚನೆ ಮಾಡಲು, ಎರಡು ತಿಂಗಳಲ್ಲಿ ವರದಿ ನೀಡಲು ತೀರ್ಮಾನಿಸಲಾಗಿದೆ. ಇಂತಹದ್ದೊಂದು ಮಹತ್ವದ ಆದೇಶವನ್ನು ಸರಕಾರ ತೆಗೆದುಕೊಂಡಿದೆ.
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಬೇಕು ಎಂಬುದು ಬಹಳ ದಿನಗಳ ಬೇಡಿಕೆ, ಬೇಡಿಕೆಗೆ ಸುಪ್ರೀಂ ಕೋರ್ಟ್ ಕೂಡ ಹಸಿರುನಿಶಾನೆ ತೋರಿದ ಬೆನ್ನಲ್ಲೇ ರಾಜ್ಯಸಲ್ಲಿ ಒಳಮೀಸಲಾತಿ ಜಾರಿಗೆ ತೀರ್ಮಾನಿಸಲಾಗಿದೆ. ಇದೀಗ ಆಯೋಗ ರಚನೆ ಮಾಡಿದ್ದು, ವರದಿ ನೀಡಲು ಎರಡು ತಿಂಗಳ ಗಡುವು ನೀಡಲಾಗಿದೆ.