ಉಪಯುಕ್ತ ರಾಜಕೀಯ ಸುದ್ದಿ

ಆರ್ಹರ ಪಡಿತರ ರದ್ದು ಮಾಡದಂತೆ ಸಿಎಂ ಸೂಚನೆ

Share It


ಬೆಂಗಳೂರು: ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಸಿಎಂ ಸಿದ್ದರಾಮಯ್ಯ, ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ.

ಬಡ ಕುಟುಂಬಗಳ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿಗಳು ಎಚ್ವರಿಕೆ ನೀಡಿದ್ದಾರೆ.


Share It

You cannot copy content of this page