ಫೆಬ್ರವರಿಯಲ್ಲಿ ಜಿಪಂ, ತಾಪಂ ಚುನಾವಣೆ ?
ಬೆಂಗಳೂರು: ಕಳೆದ ನಾಲ್ಕು ವರ್ಷಗಳಿಂದ ನಡೆಯದೇ ಇದ್ದ ಜಿಲ್ಲಾ ಪಂಚಾಯತ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳನ್ನು ಫೆಬ್ರವರಿಯಲ್ಲಿ ನಡೆಸಲು ಸರಕಾರ ಸಿದ್ಧತೆ ನಡೆಸುತ್ತಿದೆ.
ಈ ಸಂಬಂಧ ಚುನಾವಣಾ ಆಯೋಗ ಸಿದ್ಧತೆ ಆರಂಭಿಸಿದ್ದು, ಮೀಸಲು ಪಟ್ಟಿಯ ಪರಿಷ್ಕರಣೆ ಸೇರಿದಂತೆ ಇನ್ನಿತರ ವ್ಯವಸ್ಥೆ ಮಾಡಿಕೊಳ್ಳುತ್ತಿದೆ. ಡಿ. 12 ರೊಳಗೆ ಹೈಕೋರ್ಟ್ ಗೆ ಮೀಸಲಾತಿ ಪಟ್ಟಿ ಸಲ್ಲಿಕೆ ಮಾಡಬೇಕಿದೆ. ಸರಕಾರ ಪಟ್ಟಿ ಸಲ್ಲಿಕೆ ಮಾಡುತ್ತಿದ್ದಂತೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲು ಆಯೋಗ ಸಜ್ಜಾಗಿದೆ.
ತಾಪಂ ಮತ್ತು ಜಿಪಂ ಚುನಾವಣೆಗಳು2021 ರಲ್ಲಿಯೇ ನಡೆಯಬೇಕಿತ್ತು. ಆದರೆ, ಅಂದಿನ ಸರಕಾರ ಮೀಸಲಾತಿ ಗೊಂದಲದಿಂದಾಗಿ ಚುನಾವಣೆ ನಡೆಸಲಿಲ್ಲ. ಇದೀಗ ನ್ಯಾಯಾಲಯ ಚುನಾವಣೆ ಮಡೆಸುವಂತೆ ತಾಕೀತು ಮಾಡಿದ್ದು, ಫೆಬ್ರವರಿಯಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.
ರಾಜ್ಯದ 31 ಜಿಲ್ಲೆಗಳಲ್ಲಿ 1130 ಜಿಲ್ಲಾ ಪಂಚಾಯತ್ ಸ್ಥಾನಗಳಿಗೆ ಹಾಗೂ 3671 ತಾಲೂಕು ಪಂಚಾಯತ್ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಇದೀಗ ಈ ಎಲ್ಲ ಸ್ಥಾನಗಳ ಮೀಸಲಾತಿ ಪಟ್ಟಿಯನ್ನು ಸರಕಾರ ಡಿ.12 ರೊಳಗೆ ಪ್ರಕಟ ಮಾಡಬೇಕಿದೆ.


