ಐಗಳಿ ಪೊಲೀಸ್ ಠಾಣೆಯ ಎಎಸ್ಐ ಆತ್ಮಹತ್ಯೆ

Share It

ಬೆಳಗಾವಿ : ಹಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬೆಳಗಾವಿ ಜಿಲ್ಲೆ ಅಥಣಿ ತಾಲೂಕು ಐಗಳಿ ಪೊಲೀಸ್ ಠಾಣೆಯ ಎಎಸ್ಐ ಶುಕ್ರವಾರದಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಂಭು ಮೇತ್ರಿ (50)ಆತ್ಮಹತ್ಯೆ ಮಾಡಿಕೊಂಡವರು.

ಅವರು ತಮ್ಮ ಸ್ವಂತ ಗ್ರಾಮವಾಗಿರುವ ಅನಂತಪುರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲವು ತಿಂಗಳುಗಳಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share It

You May Have Missed

You cannot copy content of this page