ಪಿಡಿಒ ಹುದ್ದೆಗಳ ನೇಮಕಾತಿ ಪರೀಕ್ಷೆ ಸಿದ್ಧತೆ : ನಾಳೆ ನಡೆಯುವ ಪರೀಕ್ಷೆಯ ವಿಶೇಷತೆ ಏನು ಗೊತ್ತಾ?
ಬೆಂಗಳೂರು: ಪಂಚಾಯಿತಿ ಅಭಿವೃದ್ಧಿ ಅಧಿಕಾರಿ 150 ಹುದ್ದೆಗಳ (RPC) ನೇಮಕಾತಿಗೆ ಭಾನುವಾರ (ಡಿ.8) ರಂದು ಪರೀಕ್ಷೆ ನಡೆಯಲಿದೆ.
ರಾಜ್ಯಾದ್ಯಂತ 3,86,099 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಹಾಗೂ ಶನಿವಾರ ನಡೆಯುವ ಕಡ್ಡಾಯ ಕನ್ನಡ ಪರೀಕ್ಷೆಗೆ 2,90,018 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.
30 ಜಿಲ್ಲೆಗಳ 1,035 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ. ಪರೀಕ್ಷೆಗೆ ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಪರೀಕ್ಷಾ ಪ್ರಾಧಿಕಾರ ಮಾಡಿಕೊಂಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪರೀಕ್ಷೆ ನಡೆಸುವ ಗುರಿ ಹೊಂದಿದೆ.


