ಸಕಲೇಶಪುರ: ಬೆಂಗಳೂರಿನಿAದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಸಕಲೇಶಪುರ ಬಳಿಯ ಮಳಲಿ ಕ್ರಾಸ್ ಬಳಿ ಅಪಘಾತಕ್ಕೀಡಾಗಿರುವ ಘಟನೆ ಮುಂಜಾನೆ ನಡೆದಿದೆ.
ಬಸ್‌ನಲ್ಲಿ ೩೦ಕ್ಕೂ ಜನರಿದ್ದು, ೨೦ ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳಿಗೆ ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ವೇಗವಾಗಿ ಬಂದ ಬಸ್ ನಿಯಂತ್ರಣ ಕಳೆದುಕೊಂಡು ಬಿದ್ದಿದೆ ಎಂದು ಹೇಳಲಾಗುತ್ತಿದ್ದು, ಪ್ರಯಾಣೀಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸಕಲೇಶಪುರ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಹೆಚ್ಚಿನ ವಿಚಾರಣೆ ಕೈಗೊಂಡಿದ್ದಾರೆ.