ಎಸ್‌.ಎಂ.ಕೃಷ್ಣ ನಡೆದು ಬಂದ ಹಾದಿ

Share It

  • ಎಸ್.ಎಂ.ಕೃಷ್ಣ(ಸೋಮನಹಳ್ಳಿ ಮಲ್ಲಯ್ಯ ಕೃಷ್ಣ) ಅವರು 1932 ಮೇ.1ರಂದು ಮಲ್ಲಯ್ಯ ಮತ್ತು ತಾಯಮ್ಮ ದಂಪತಿಯ ಮಗನಾಗಿ ಮದ್ದೂರು ತಾಲೂಕು ಸೋಮನಹಳ್ಳಿಯಲ್ಲಿ ಜನನ
  • ಸೋಮನಹಳ್ಳಿಯಲ್ಲಿ ಪ್ರಾಥಮಿಕ ಶಿಕ್ಷಣ
  • ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ಪ್ರೌಢಶಿಕ್ಷಣ
  • ಯುವರಾಜ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ

ಮಹಾರಾಜ ಕಾಲೇಜಿನಲ್ಲಿ ಕಾನೂನು ಪದವಿ ಶಿಕ್ಷಣ

  • ಅಮೆರಿಕಾದ ಡಲ್ಲಾಸ್‌ನ ಸೌಥರ್ನ್ ಮೆತಡಿಸ್ಟ್ ಹಾಗೂ ಜಾರ್ಜ್ ವಾಷಿಂಗ್ಟನ್ ವಿವಿಯಲ್ಲಿ ಉನ್ನತ ವ್ಯಾಸಂಗ
  • 1962ರಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಿಂದ ಪ್ರಜಾ ಸೋಷಿಯಲಿಸ್ಟ್ ಪಾರ್ಟಿಯಿಂದ ಚುನಾವಣಾ ರಾಜಕೀಯ ಆರಂಭ, ಮೊದಲ ಚುನಾವಣೆಯಲ್ಲಿ ಗೆಲುವು
  • 1967 ರ ವಿಧಾನಸಭಾ ಚುನಾವಣೆಯಲ್ಲಿ ಸೋಲು

1968ರ ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು

  • 1971ರಲ್ಲಿ ಎಂಪಿಯಾಗಿ ಮರು ಆಯ್ಕೆ. ಈ ವೇಳೆ ಡಿ.ದೇವರಾಜ ಅರಸು ಕೃಷ್ಣ ಅವರನ್ನು ಎಂಎಲ್ಸಿ ಮಾಡಿಕೊಂಡು ಸಚಿವರನ್ನಾಗಿ ಮಾಡುತ್ತಾರೆ. ಇದರಿಂದಾಗಿ ಸಂಸದ ಸ್ಥಾನಕ್ಕೆ ರಾಜೀನಾಮೆ
  • 1980ರಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಆಯ್ಕೆಯಾಗುತ್ತಾರೆ. ಮೂರನೇ ಬಾರಿಗೆ ಎಂಪಿಯಾದ ಹಿನ್ನೆಲೆಯಲ್ಲಿ ಕೇಂದ್ರ ಹಣಕಾಸು ಸಚಿವರಾಗುತ್ತಾರೆ
  • 1984ರ ಎಂಪಿ ಚುನಾವಣೆಯಲ್ಲಿ ನಿತ್ಯಸಚಿವ ಕೆ.ವಿ.ಶಂಕರಗೌಡ ಅವರ ವಿರುದ್ಧ ಸೋಲು
  • 1989ರಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆದ್ದು ಡಿಸಿಎಂ ಹಾಗೂ ಸ್ಪೀಕ‌ರ್ ಹುದ್ದೆ ಅಲಂಕರಿಸುತ್ತಾರೆ
  • 1994ರಲ್ಲಿ ಸೋಲು ಅನುಭವಿಸುತ್ತಾರೆ
  • 1996ರಲ್ಲಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆ
  • 1999ರಲ್ಲಿ ಗೆದ್ದು ರಾಜ್ಯದ ಸಿಎಂ ಆಗಿ ಅಧಿಕಾರ ಸ್ವೀಕಾರ

2004ರ ಚುನಾವಣೆಯಲ್ಲಿ ಬೆಂಗಳೂರು ಚಾಮರಾಜಪೇಟೆಯಿಂದ ಸ್ಪರ್ಧಿಸಿ ಗೆಲುವು

  • 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ
  • 2010ರಲ್ಲಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಗೊಂಡು ಡಾ.ಮನ್‌ಮೋಹನ್ ಸಿಂಗ್ ಸಂಪುಟದಲ್ಲಿ ಕೇಂದ್ರ ವಿದೇಶಾಂಗ ಸಚಿವರಾಗಿ ಕಾರ್ಯ ನಿರ್ವಹಣೆ
  • 2017ರಲ್ಲಿ ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರ್ಪಡೆ. ಕೆಲ ತಿಂಗಳಲ್ಲಿ ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಣೆ
  • 1982ರಲ್ಲಿ ವಿಶ್ವಸಂಸ್ಥೆಗೆ ತೆರಳಿದ ಭಾರತದ ನಿಯೋಗ ದಲ್ಲಿ ಸದಸ್ಯ
  • 1990ರಲ್ಲಿ ಇಂಗ್ಲೆಂಡ್‌ನಲ್ಲಿ ನಡೆದ ಕಾಮನ್‌ವೆಲ್ತ್ ಸಂಸದೀಯ ವಿಚಾರ ಸಂಕಿರಣ ಪ್ರತಿನಿಧಿ
  • 1964 ಏ.29ರಂದು ಶಿವಮೊಗ್ಗ ಜಿಲ್ಲೆ ಕುಡುಮಲ್ಲಿಗೆಯ ಚನ್ನಪ್ಪಗೌಡ ಮತ್ತು ಕಮಲಾಕ್ಷಮ್ಮ ದಂಪತಿಯ ಪುತ್ರಿ ಪ್ರೇಮಾ ಅವರೊಂದಿಗೆ ವಿವಾಹ. ಮಾಳವಿಕಾ ಹಾಗೂ ಶಾಂಭವಿ ಇಬ್ಬರು ಹೆಣ್ಣು ಮಕ್ಕಳು

Share It

You May Have Missed

You cannot copy content of this page