ಉಪಯುಕ್ತ ರಾಜಕೀಯ ಸುದ್ದಿ

ಗೃಹಲಕ್ಷ್ಮೀ ಹಣದಲ್ಲಿ ಬೋರ್ ವೆಲ್ ಕೊರೆಸಿದ ಅತ್ತೆ-ಸೊಸೆ: ಸಿಎಂ ಸಿದ್ದರಾಮಯ್ಯ ಶ್ಲಾಘನೆ

Share It

ಬೆಂಗಳೂರು: ನಮ್ಮ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಮೂಲಕ ಪಡೆದ ಹಣದಲ್ಲಿ ಬೋರ್‌ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ – ಸೊಸೆಯ ಮಾತುಗಳು ಕೇಳಿ ಖುಷಿಯಾಯಿತು ಎಂದು ಸಿದ್ದರಾಮಯ್ಯ ಅಭಿನಂದಿಸಿದ್ದಾರೆ.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಮಾಲದಾರ ಓಣಿಯ ಅತ್ತೆ ಮಾಬುಬೀ ಹಾಗೂ ಸೊಸೆ ರೋಷನ್ ಬೇಗಂ ಪ್ರತಿ ತಿಂಗಳು ತಮಗೆ ಬಂದ ಗೃಹಲಕ್ಷ್ಮಿ ಹಣ ಕೂಡಿಟ್ಟು ಕೃಷಿ ಭೂಮಿಗೆ ಬೋರ್‌ವೆಲ್ ಕೊರೆಸಿ, ಸಮೃದ್ಧ ನೀರು ಪಡೆದಿದ್ದಾರೆ.

ನಾಡಿನ ಬಡಕುಟುಂಬಗಳಿಗೆ ಆರ್ಥಿಕ ಶಕ್ತಿ ತುಂಬಿ, ಅವರನ್ನು ಸ್ವಾವಲಂಬಿಗಳನ್ನಾಗಿಸುವ ಈ ಯೋಜನೆಯ ಉದ್ದೇಶ ಯಶಸ್ವಿಯಾಗಿ ಈಡೇರುತ್ತಿರುವುದು ಯೋಜನೆಯನ್ನು ಜಾರಿಗೆ ಕೊಟ್ಟ ನನ್ನಲ್ಲಿ ಸಂತೃಪ್ತಭಾವ ಮೂಡಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಅತ್ತೆ – ಸೊಸೆಯ ನಡುವೆ ಜಗಳ ಆರಂಭವಾಗುತ್ತದೆ, ಸಂಸಾರಗಳು ಒಡೆಯುತ್ತವೆ ಎಂದು ಟೀಕಿಸಿದ ಜನರಿಗೆ ಬಾರಿಸಿದ ತಪರಾಕಿ ಇದು. ಬೆಳಕಿಗೆ ಬಾರದ ಇಂತಹ ಇನ್ನೂ ಸಾವಿರಾರು ಯಶೋಗಾಥೆಗಳಿವೆ, ಗೃಹಲಕ್ಷ್ಮಿ ನಾಡಿನ ತಾಯಂದಿರ ಬಾಳಿಗೆ ಅಕ್ಷರಶಃ ಭಾಗ್ಯಲಕ್ಷ್ಮಿಯಾಗಿದೆ ಎನ್ನುವುದರಲ್ಲಿ ಯಾವ ಸಂಶಯವೂ ಇಲ್ಲ ಎಂದಿದ್ದಾರೆ.


Share It

You cannot copy content of this page