ಉಪಯುಕ್ತ ಸುದ್ದಿ

ಮಾಜಿ ಸೈನಿಕರಿಗೆ ಸರಕಾರದ ಗುಡ್ ನ್ಯೂಸ್: ಸರಕಾರದಿಂದಲೇ ಲೇಔಟ್ ನಿರ್ಮಿಸಿ ಸೈಟ್ ಹಂಚಿಕೆ

Share It


ಬೆಳಗಾವಿ: ರಾಜ್ಯ ಸರಕಾರ ಮಾಜಿ ಸೈನಿಕರಿಗೆ ಗುಡ್ ನ್ಯೂಸ್ ಕೊಟ್ಟಿದ್ದು, ಲೇಔಟ್ ನಿರ್ಮಾಣ ಮಾಡಿ ನಿವೇಶನ ಹಂಚಿಕೆ ಮಾಡಲು ತೀರ್ಮಾನಿಸಿದೆ‌.

ರಾಜ್ಯದಲ್ಲಿರುವ ಮಾಜಿ ಸೈನಿಕರಿಗೆ ವ್ಯವಸಾಯದ ಉದ್ದೇಶಕ್ಕಾಗಿ ಭೂ ಮಂಜೂರಾತಿ ಮಾಡಲು ರಾಜ್ಯದಲ್ಲಿ ಸರ್ಕಾರಿ ಭೂಮಿಯ ತೀವ್ರ ಕೊರತೆಯಿದೆ. ಆದರೂ ಜವಾನ್ ಸಮ್ಮಾನ್ ಹೆಸರಿನಲ್ಲಿ ಮಾಜಿ ಸೈನಿಕರಿಗೆ ಸರ್ಕಾರಿ ವೆಚ್ಚದಲ್ಲಿಯೇ ಲೇ ಔಟ್ ಮಾಡಿ, ನಿವೇಶನ ನೀಡುವ ಕುರಿತಂತೆ ಪ್ರಸ್ತುತ ಅಧಿವೇಶನ ಮುಗಿದ ಕೂಡಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು.

ದೇಶಕ್ಕಾಗಿ ಸೇವೆ ಸಲ್ಲಿಸಿರುವ ಮಾಜಿ ಸೈನಿಕರ ಕುರಿತಂತೆ ಗೌರವ ಮತ್ತು ಅಭಿಮಾನವಿದೆ. ರಾಜ್ಯದಲ್ಲಿ ಪ್ರಸ್ತುತ 16,065 ಮಾಜಿ ಸೈನಿಕರು ಭೂ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿದ್ದು, ಅದರಲ್ಲಿ 6,783 ಅರ್ಜಿ ವಿಲೇವಾರಿ ಮಾಡಿದ್ದು, 9,282  ಅರ್ಜಿಗಳು ಬಾಕಿ ಇವೆ ಎನ್ನಲಾಗಿದೆ.


Share It

You cannot copy content of this page