ಉಪಯುಕ್ತ ರಾಜಕೀಯ ಸುದ್ದಿ

ಹೊಸಕೋಟೆ, ಬಿಡದಿ, ನೆಲಮಂಗಲಕ್ಕೆ ಮೆಟ್ರೋ ವಿಸ್ತರಣೆ ಪ್ರಸ್ತಾವ ಸರ್ಕಾರದ ಮುಂದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

Share It

ಬೆಳಗಾವಿ:

ಮುಂದಿನ ದಿನಗಳಲ್ಲಿ ಸಂಚಾರ ದಟ್ಟಣೆ ಗಮನದಲ್ಲಿಟ್ಟುಕೊಂಡು, ನಮ್ಮ ಮೆಟ್ರೋ ಮಾರ್ಗವನ್ನು ಹೊಸಕೋಟೆ, ನೆಲಮಂಗಲ ಹಾಗೂ ಬಿಡದಿವರೆಗೆ ವಿಸ್ತರಣೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನಸಭೆಯ ಕಲಾಪದಲ್ಲಿ ಕಾಂಗ್ರೆಸ್ ಶಾಸಕ ಶರತ್ ಬಚ್ಛೆಗೌಡ ಅವರು ಹೊಸಕೋಟೆಗೆ ಮೆಟ್ರೋ ಮಾರ್ಗ ವಿಸ್ತರಣೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು.

“ಈ ವಿಚಾರವಾಗಿ ಶರತ್ ಅವರು ಬಹಳ ಹೋರಾಟ ಮಾಡುತ್ತಿದ್ದಾರೆ. ಬೆಂಗಳೂರು ಕೂಡ ವಿಪರೀತವಾಗಿ ಬೆಳೆಯುತ್ತಿದೆ. ಸಾಮಾನ್ಯ ರೈಲಿನಲ್ಲಿ ಕೋಲಾರದಿಂದ ಸುಮಾರು 10 ಸಾವಿರಕ್ಕೂ ಹೆಚ್ಚು ಜನ ದಿನ ನಿತ್ಯ ಸಂಚರಿಸುತ್ತಾರೆ. ಐಟಿ ಕಾರಿಡಾರ್ ಬಹುತೇಕ ಹೊಸಕೋಟೆ ಮುಟ್ಟಿದೆ. ಹೀಗಾಗಿ ಮೆಟ್ರೋ ಅವಶ್ಯಕತೆ ಇದೆ” ಎಂದು ತಿಳಿಸಿದರು.

“ಮಾರ್ಗ ವಿಸ್ತರಣೆ ವಿಚಾರವನ್ನು ನಾನು ಈಗಾಗಲೇ ಯೋಜನೆಯಲ್ಲಿ ಸೇರಿಸಿ ವಿಸ್ತೃತ ಸಮೀಕ್ಷೆ ಮಾಡಿಸುತ್ತಿದ್ದೇನೆ. ನಮ್ಮ ಸರ್ಕಾರ ಹಾಗೂ ಮೆಟ್ರೋ ಸಂಸ್ಥೆ ಅವರ ಮನವಿಯನ್ನು ಸಹಾನುಭೂತಿಯಿಂದ ಪರಿಗಣಿಸಿದೆ. ಹೊಸಕೋಟೆ ಜತೆಗೆ ಬಿಡದಿ, ನೆಲಮಂಗಲದವರೆಗೂ ಮೆಟ್ರೋ ಮಾರ್ಗ ವಿಸ್ತರಣೆ ಯೋಜನೆ ಸಿದ್ಧಡಿಸಲು ವರದಿ ರೂಪಿಸಲಾಗುತ್ತಿದೆ. ನಾವು ನಿಮ್ಮ ಮನವಿಯನ್ನು ಪರಿಗಣಿಸಿದ್ದೇವೆ” ಎಂದು ತಿಳಿಸಿದರು.


Share It

You cannot copy content of this page