ವಿರಾಟ್ ಕೋಹ್ಲಿ ಮಾಲೀಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೊಟೀಸ್
ಬೆಂಗಳೂರು: ಬೆಂಗಳೂರಿನಲ್ಲಿರುವ ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಬಾರ್ ಅಂಡ್ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೊಟೀಸ್ ನೀಡಿದೆ.
ಕ್ರಿಕೆಟರ್ ವಿರಾಟ್ ಕೊಹ್ಲಿ ಫ್ರಾಂಚೈಸ್ ಪಡೆದಿರುವ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಮುಂಭಾಗದ ಒನ್-8 ಕಮ್ಯೂನ್ ಬಾರ್ ಅಂಡ್ ರೆಸ್ಟೋರೆಂಟ್‌ಗೆ ಬಿಬಿಎಂಪಿ ಬಿಸಿ ಮುಟ್ಟಿಸಿದ್ದು, ಅಗ್ನಿಶಾಮಕ ದಳದಿಂದ ನಕ್ಷೆ, ಪ್ರಮಾಣ ಪತ್ರ, ಎನ್‌ಒಸಿ ಪರವಾನಗಿ ಪಡೆಯದೇ ಕಾನೂನು ಉಲ್ಲಂಘನೆ ಮಾಡಿದ್ದಕ್ಕೆ ನೋಟಿಸ್ ನೀಡಿದೆ.
ಸಾಮಾಜಿಕ ಕಾರ್ಯಕರ್ತ ಹೆಚ್.ಎಂ.ವೆAಕಟೇಶ್ ಎನ್ನುವವರು ಈ ಬಗ್ಗೆ ಬಿಬಿಎಂಪಿಗೆ ದೂರು ಕೊಟ್ಟಿದ್ದು, ಇದನ್ನು ಆಧರಿಸಿ ಶಾಂತಿನಗರದ ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಈಗಾಗಲೇ ಒಂದು ಬಾರಿ ನೋಟಿಸ್ ನೀಡಿದ್ದರೂ, ಕೊಹ್ಲಿ ಮಾಲೀಕತ್ವದ ಬಾರ್ ಅಂಡ್ ರೆಸ್ಟೋರೆಂಟ್‌ನಿAದ ಯಾವುದೇ ಪ್ರತಿಕ್ರಿಯೆ ನೀಡಲಾಗಿಲ್ಲ. ಹೀಗಾಗಿ ಮತ್ತೆ ನೋಟಿಸ್ ಜಾರಿ ಮಾಡಿ, ಲಿಖಿತ ಸಮಜಾಯಿಷಿ ಕೇಳಲಾಗಿದೆ. ಉತ್ತರ ನೀಡದೇ ಇದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆ ನೀಡಲಾಗಿದೆ.
ಜುಲೈ ತಿಂಗಳಿನಲ್ಲಿ ಅವಧಿ ಮೀರಿ ಗ್ರಾಹಕರಿಗೆ ಅನುವು ಮಾಡಿಕೊಡುತ್ತಿದ್ದ ಆರೋಪದಡಿ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಒನ್ 8 ಕಮ್ಯೂನ್ ರೆಸ್ಟೋರೆಂಟ್ ಸೇರಿ ಮೂರು ರೆಸ್ಟೋರೆಂಟ್‌ಗಳ ವ್ಯವಸ್ಥಾಪಕರ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ನಿಯಮಗಳನ್ನು ಮೀರಿ ಕಾರ್ಯ ನಿರ್ವಹಿಸುತ್ತಿರುವ ರೆಸ್ಟೋರೆಂಟ್, ಬಾರ್, ಪಬ್ ವಿರುದ್ಧ ಜುಲೈ 6 ರಂದು ರಾತ್ರಿ ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ, ಅವಧಿ ಮೀರಿದ ಬಳಿಕವೂ ಗ್ರಾಹಕರಿಗೆ ಅನುವು ಮಾಡಿಕೊಡುತ್ತಿದ್ದ ಆರೋಪದಡಿ ನಗರದ ಕಸ್ತೂರಬಾ ರಸ್ತೆಯ ಒನ್-೮ ರೆಸ್ಟೋರೆಂಟ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.