ಈಶಾ ಫೌಂಡೇಶನ್​ನಿಂದ ರೈತ ಉತ್ಪಾದಕ ಕಂಪನಿಗಳ ಆರಂಭ

IMG-20241223-WA0001
Share It

ಚಿಕ್ಕಬಳ್ಳಾಪುರ: ಈಶಾ ಫೌಂಡೇಶನ್​ನಿಂದ ರೈತ ಉತ್ಪಾದಕ ಕಂಪನಿಗಳ ಆರಂಭ ಮಾಡಲಾಗಿದ್ದು, ಆ ಮೂಲಕ ರೈತರಿಗೆ ಮಾಹಿತಿ, ಸಲಹೆ, ಮಾರ್ಗದರ್ಶನ ನೀಡುತ್ತೇವೆ. ಸದ್ಯಕ್ಕೆ ಹತ್ತು ಸಾವಿರ ರೈತರಿಗೆ ಮಾರ್ಗದರ್ಶನ ಮಾಡಲು ಸನ್ನದ್ದವೆಂದು ಸದ್ಗುರು ಜಗ್ಗಿ ವಾಸುದೇವ್ ಅವರು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ‌ ಗ್ರಾಮದಲ್ಲಿ ಮಾತನಾಡಿದ ಅವರು, ಈಶಾ ಸಂಸ್ಥೆ ವತಿಯಿಂದ ದಕ್ಷಿಣ ಭಾರತದ 5 ರಾಜ್ಯಗಳಲ್ಲಿ ಗ್ರಾಮೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ ಎಂದರು.

ಗ್ರಾಮೀಣ ಭಾಗದ ಜನ ಮದ್ಯವ್ಯಸನಿಗಳಾಗುತ್ತಿದ್ದಾರೆ. ಕೃಷಿ ಕಾಯಕ ಮಾಡಿ ಮದ್ಯ ಸೇವನೆ ಮಾಡಿ ಮಲಗಿಕೊಳ್ಳುತ್ತಿದ್ದಾರೆ. ಅವರ ಜೀವನದಲ್ಲಿ ಉತ್ಸಾಹ ಚೈತನ್ಯ ತುಂಬುವ ಸಲುವಾಗಿ ಗ್ರಾಮೀಣ ಭಾಗದವರಿಗೆ ಗ್ರಾಮೋತ್ಸವ ಕ್ರೀಡೆಗಳನ್ನ ಆಯೋಜನೆ ಮಾಡುವ ಮೂಲಕ ಮದ್ಯ ವ್ಯಸನ ಮುಕ್ತರನ್ನಾಗಿ ಮಾಡಲು ಶ್ರಮಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಕ್ರೀಡೆಗಳ ಮೂಲಕ ಜಾತಿ ತಾರತಮ್ಯ ದೂರ ಮಾಡುತ್ತಿದ್ದೇವೆ. ಇನ್ನೂ ದೇಶದಲ್ಲಿ ಮಣ್ಣು ಸತ್ವ ಕಳೆದುಕೊಳ್ಳುತ್ತಿದೆ. ಪರಿಸರದಲ್ಲಿ ಸಮತೋಲನ ಕಾಪಾಡಬೇಕಿದೆ. ಲಾಭವಿಲ್ಲದ ವಿಚಾರಗಳ ಬಗ್ಗೆ ಯಾರೂ ಸಹ ಮಾತನಾಡುತ್ತಿಲ್ಲ. ಎಲೆಕ್ಟ್ರಿಕಲ್​ ವಾಹನಗಳಿಂದ ಪರಿಸರಕ್ಕೆ ಅನುಕೂಲವಿಲ್ಲ. ನನ್ನ ಹೇಳಿಕೆ ವಿವಾದ ಆದರೂ ಪರವಾಗಿಲ್ಲ. ನಗರ ಪ್ರದೇಶಗಳಿಗೆ ಮಾತ್ರ ಎಲೆಕ್ಟ್ರಿಕಲ್​ ವಾಹನಗಳು ಸೂಕ್ತ ಎಂದು ಹೇಳಿದ್ದಾರೆ.

ಭೂಮಿ ಮೇಲೆ ಮನುಷ್ಯನಿಗಿಂತ ಅದ್ಬುತ ಯಾವುದು ಇಲ್ಲ
ಶ್ರೀಗಂಧದ ನಾಡು ಕರ್ನಾಟಕ ಆಸ್ಟ್ರೇಲಿಯಾದಿಂದ ಶ್ರೀಗಂಧ ಆಮದು ಮಾಡಿಕೊಳ್ತಿದ್ದೇವೆ. ರೈತರು ಹೆಚ್ಚಾಗಿ ಶ್ರೀಗಂಧ ಬೆಳೆಯಲು ಸರ್ಕಾರ ಉತ್ತೇಜನ ನೀಡಬೇಕಿದೆ. ಯುವಕ ಯುವತಿಯರಲ್ಲಿ ಜೀವನ ನಿರ್ವಹಣೆ ಮಾಹಿತಿ ಕೊರತೆ ಇದೆ. ಜೀವನ ನಿರ್ಹವಣೆ ಬಗ್ಗೆ ಆಶಕ್ತಿ ವಹಿಸಿದ್ದೇವೆ. ಮಿರಾಕಲ್ ಅನ್ನೊ ಆ್ಯಪ್​ ರೆಡಿ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿ ಖಂಡಿಸಿದ ಸದ್ಗುರು, ಬಾಂಗ್ಲಾದೇಶ ಉದ್ಬವವಾಗಲು ಭಾರತದ ಕೊಡುಗೆ ಮರೆಯುವಂತಿಲ್ಲ. ಭಾರತದ ಪಕ್ಕದಲ್ಲೇ ಮಿತ್ರ ದೇಶವಾಗಿ ಇರಲಿ ಅಂತ ಸಹಕಾರ ನೀಡಿದೆ. ಆದರೆ ಹಿಂದೂಗಳ ಮೇಲೆ ದಾಳಿ ನಡೆಯುತ್ತಿದ್ದು, ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದೇವೆ ಎಂದು ತಿಳಿಸಿದರು.


Share It

You cannot copy content of this page