ರಾಜಕೀಯ ಸುದ್ದಿ

ರಾಜ್ಯದ 5,605 ಜನರಿಗೆ ಉದ್ಯೋಗಾವಕಾಶ:9,823.21 ಕೋಟಿ ರು. ಬಂಡವಾಳ ಹೂಡಿಕೆ

Share It

ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 64 ನೇ ಸಭೆ

ಬೆಂಗಳೂರು : ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 64 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳು, ಒಟ್ಟು 9823.31 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು , ಸುಮಾರು 5605 ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎಂದು ತಿಳಿಸಿದರು.

ಇಂದಿನ ಸಭೆಯಲ್ಲಿ ಮೂರು ಹೊಸ/ ವಿಸ್ತರಣಾ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ ಆರು ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಸೇರಿದಂತೆ ಒಟ್ಟು 9 ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

ಮೆ.ಡಿ.ಎನ್ ಸಲ್ಯೂಷನ್ಸ್ ಇಂಡಿಯಾ ಪ್ರೈ.ಲಿ ಸಂಸ್ಥೆಯ 998 ಕೋಟಿ ರೂ.ಗಳ ಹೊಸ ಬಂಡವಾಳ ಹೂಡಿಕೆಯ ಯೋಜನೆಯಿಂದ 467 ಉದ್ಯೋಗ , ಮೆ. ಸೈಲೆಕ್ಟ್ರಿಕ್ ಸೆಮಿಕಂಡಕ್ಟರ್ ಮ್ಯಾನುಫ್ಯಾಕ್ಷರಿಂಗ್ ಪ್ರೈ.ಲಿ ಸಂಸ್ಥೆ ಯ 3425.60 ಕೋಟಿ ರೂ. ಹೂಡಿಕೆಯಿಂದ 460 ಉದ್ಯೋಗ ಹಾಗೂ ಮೆ: ಸನ್ಸೆರಾ ಇಂಜಿನಿಯರಿಂಗ್ ಲಿಮಿಟೆಡ್ ಸಂಸ್ಥೆಯ 2150 ಕೋಟಿ ರೂ. ಹೂಡಿಕೆಯಿಂದ 3500 ಉದ್ಯೋಗ ಸೃಷ್ಠಿಯಾಗುತ್ತಿರುವುದಾಗಿ ತಿಳಿಸಿದರು.

ಸಭೆಯಲ್ಲಿ ಸಚಿವ ಎಂ ಬಿ ಪಾಟೀಲ್, ಚೆಲುವರಾಯಸ್ವಾಮಿ ಪ್ರಿಯಾಂಕ ಖರ್ಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್ ಕೆ ಅತೀಕ್, ವಾಣಿಜ್ಯ ಮತ್ರು ಕೈಗಾರಿಕಾ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಹಾಜರಿದ್ದರು.


Share It

You cannot copy content of this page